ರೇವಾ: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಏಷ್ಯಾದ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆಗೊಳ್ಳಲಿದೆ.
ಏಷ್ಯಾದ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇದಾಗಿದ್ದು, ಬರೋಬ್ಬರಿ 750 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿದೆ. ಸದ್ಯ ಅಮೆರಿಕದ ಕ್ಯಾಲಿಫೋರ್ನಿಯಾದ ಅತಿ ದೊಡ್ಡ ಸೋಲಾರ್ ಪ್ಲಾಂಟ್ನ ದಾಖಲೆ ಬ್ರೇಕ್ ಮಾಡಲಿದೆ.
ಬರೋಬ್ಬರಿ 3,700 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದಕ್ಕಾಗಿ 4,500 ಕೋಟಿ ರೂ ವೆಚ್ಚ ಮಾಡಲಾಗಿದೆ. ಭಾರತದ ಸೌರಶಕ್ತಿ ಶಕ್ತಿ ನಿಗಮ ಮತ್ತು ಎಂಪಿ ಉರ್ಜಾ ವಿಕಾಸ್ ನಿಗಮ ಜಂಟಿಯಾಗಿ ರೇವಾ ಅಲ್ಟ್ರಾ ಮೆಗಾ ಸೋಲಾರ್ ಹೆಸರಿನ ಈ ಯೋಜನೆಯ ನೇತೃತ್ವವಹಿಸಿವೆ.