ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪಿಎಂ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಭಯೋತ್ಪಾದಕ ದಾಳಿ ಬಗ್ಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಜನವರಿ 29 ರಂದು ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.
ಇಸ್ರೇಲಿ ರಾಜತಾಂತ್ರಿಕರರಿಗೆ ಹೆಚ್ಚಿನ ಸುರಕ್ಷತೆಗೆ ಭಾರತವು ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ಅಪರಾಧಿಗಳನ್ನು ಹುಡುಕಲು ಮತ್ತು ಶಿಕ್ಷಿಸಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಎಂದು ಪ್ರಧಾನಿ ಮೋದಿ ನೆತನ್ಯಾಹು ಅವರಿಗೆ ಭರವಸೆ ನೀಡಿದ್ದಾರೆ.