ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ನಡುವೆಯೇ ಹಲವು ಬಾರಿ ಪ್ರಧಾನಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಸಂಜೆ 6 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದಿದ್ದಾರೆ. ಆದರೆ ಯಾವ ವಿಷಯದ ಬಗ್ಗೆ ಮಾತನಾಡುತ್ತಾರೆ ಎಂಬುದನ್ನು ಅವರು ಹೇಳಿಲ್ಲ. ಹೀಗಾಗಿ ಮೋದಿ ಭಾಷಣ ತೀವ್ರ ಕುತೂಹಲ ಕೆರಳಿಸಿದೆ.
-
आज शाम 6 बजे राष्ट्र के नाम संदेश दूंगा। आप जरूर जुड़ें।
— Narendra Modi (@narendramodi) October 20, 2020 " class="align-text-top noRightClick twitterSection" data="
Will be sharing a message with my fellow citizens at 6 PM this evening.
">आज शाम 6 बजे राष्ट्र के नाम संदेश दूंगा। आप जरूर जुड़ें।
— Narendra Modi (@narendramodi) October 20, 2020
Will be sharing a message with my fellow citizens at 6 PM this evening.आज शाम 6 बजे राष्ट्र के नाम संदेश दूंगा। आप जरूर जुड़ें।
— Narendra Modi (@narendramodi) October 20, 2020
Will be sharing a message with my fellow citizens at 6 PM this evening.
ಕೊರೊನಾ ಸೋಂಕಿತರ ಸಂಖ್ಯೆಯೂ ಗಣನೀಯವಾಗಿ ಇಳಿಕೆ ಹಾಗೂ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರ ಎಂಬುದು ಇನ್ನೂ ಬಹಿರಂಗವಾಗಿಲ್ಲ.
ಕೊರೊನಾ ಆರಂಭವಾದಾಗಿನಿಂದ ಪ್ರಧಾನಿ ಮೋದಿ ಜನತಾ ಕರ್ಫ್ಯೂ, 21 ದಿನಗಳ ಲಾಕ್ಡೌನ್ ಹಾಗೂ ಕೊರೊನಾ ವಾರಿಯರ್ಸ್ಗೆ ಗೌರವ ಸಲ್ಲಿಸುವ ಸಲುವಾಗಿ ದೀಪ ಬೆಳಗಿಸುವಿಕೆ ಮುಂತಾದ ವಿಚಾರಗಳ ಬಗ್ಗೆ ಮಾತನಾಡಿದ್ದರು.
ಇದು ಮಾತ್ರವಲ್ಲದೇ ಹಲವು ಬಾರಿ ಕೊರೊನಾ ಪ್ಯಾಕೇಜ್ ವಿಚಾರವಾಗಿಯೂ ಮಾತನಾಡಿ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದರು. ಇದರ ಜೊತೆಗೆ ಹಲವಾರು ಬಾರಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೊರೊನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ಗಳನ್ನು ನಡೆಸಿದ್ದರು.
ಈಗ ಸದ್ಯಕ್ಕೆ ಯಾವ ವಿಷಯದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ಬಹಿರಂಗವಾಗದಿರುವುದು ತೀವ್ರ ಕುತೂಹಲ ಮೂಡಿಸಿದೆ.