ನವದೆಹಲಿ: ಇಂದಿನಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶಾದ್ಯಂತ ಬೃಹತ್ ಕೋವಿಡ್-19 ವ್ಯಾಕ್ಸಿನೇಷನ್ ಲಸಿಕೆಗೆ ಚಾಲನೆ ನೀಡಲಿದ್ದಾರೆ.
ಆರಂಭಿಕ ಹಂತದಲ್ಲಿ 3 ಕೋಟಿ ಜನರಿಗೆ ಭಾರತ ಲಸಿಕೆ ನೀಡಲು ಉದ್ದೇಶಿಸಿದ್ದು, ಇದನ್ನು ಜಗತ್ತಿನ ಅತಿದೊಡ್ಡ ಲಸಿಕಾ ಅಭಿಯಾನ ಎನ್ನಲಾಗುತ್ತಿದೆ. ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ವಿತರಣೆಗೆ ದೆಹಲಿಯಿಂದ ಚಾಲನೆ ನೀಡಲಿದ್ದಾರೆ.
ಕೋವಿಡ್ -19 ವಿರುದ್ಧದ 1.65 ಕೋಟಿ ಡೋಸ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಆರೋಗ್ಯ ಸಂಗ್ರಹಣೆದಾರರ ಡೇಟಾಬೇಸ್ ಅನುಪಾತದಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಈಗಾಗಲೇ ತಿಳಿಸಿದೆ.
ಶೇ 10ರಷ್ಟು ಮೀಸಲು ಹಾಗೂ ಪ್ರಮಾಣ ಮತ್ತು ಸರಾಸರಿ 100 ವ್ಯಾಕ್ಸಿನೇಷನನ್ನು ಗಣನೆಗೆ ತೆಗೆದುಕೊಂಡು ವ್ಯಾಕ್ಸಿನೇಷನ್ ಅವಧಿಗಳನ್ನು ಆಯೋಜಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ.