ನವದೆಹಲಿ: ಇಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಮನೆಯಲ್ಲಿ ಯೋಗ, ಕುಟುಂಬದೊಂದಿಗೆ ಯೋಗ ಘೋಷವಾಕ್ಯದ ಅಡಿಯಲ್ಲಿ ಈ ಬಾರಿಯ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಿ ಮೋದಿ ಈ ಕುರಿತು ಮಾತನಾಡಿದ್ದಾರೆ.
-
Greetings on #YogaDay! Sharing my remarks on this special occasion. https://t.co/8eIrBklnLI
— Narendra Modi (@narendramodi) June 21, 2020 " class="align-text-top noRightClick twitterSection" data="
">Greetings on #YogaDay! Sharing my remarks on this special occasion. https://t.co/8eIrBklnLI
— Narendra Modi (@narendramodi) June 21, 2020Greetings on #YogaDay! Sharing my remarks on this special occasion. https://t.co/8eIrBklnLI
— Narendra Modi (@narendramodi) June 21, 2020
ಕೊರೊನಾ ಮಹಾಮಾರಿಯ ಕಾರಣಕ್ಕೆ ಈ ಬಾರಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಕೊರೊನಾ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳು ಯೋಗದಿಂದ ಆರೋಗ್ಯ ಸುಧಾರಿಸಿಕೊಳ್ಳುತ್ತಿದ್ದಾರೆ. ಅವರು ಸೋಂಕಿನಿಂದ ಹೊರಬರಲು ಯೋಗ ಸಹಾಯ ಮಾಡುತ್ತದೆ. ಯೋಗ ಮಾನಸಿಕ ಆರೋಗ್ಯವನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದರ ಜೊತೆಗೆ ಯೋಗದ ಭಾಗವಾದ ಪ್ರಾಣಾಯಾಮ ನಮ್ಮ ದಿನನಿತ್ಯದ ಜೀವನದ ಭಾಗವಾಗಿರಬೇಕು. ಏಕೆಂದರೆ ಪ್ರಾಣಾಯಾಮದಿಂದ ನಮ್ಮ ಶ್ವಾಸಕೋಶಗಳು ಬಲಗೊಳ್ಳುತ್ತವೆ. ಈ ಬಾರಿಯ ಯೋಗ ದಿನ ಮನೆಯಲ್ಲಿಯೇ ನಡೆಯುವ ಕಾರಣದಿಂದ ಮನೆಯವರೊಂದಿಗಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.
ಯೋಗ ಭೂಮಂಡಲವನ್ನು ಆರೋಗ್ಯವಾಗಿ ಇರಿಸುತ್ತದೆ. ಮಾನವತೆಯವನ್ನು ಆಧರಿಸಿದ ಒಗ್ಗಟ್ಟನ್ನು ಕೂಡಾ ಹೆಚ್ಚಿಸುತ್ತದೆ. ಜನಾಂಗ, ವರ್ಣ, ಲಿಂಗ, ನಂಬಿಕೆ, ರಾಷ್ಟ್ರೀಯತೆಯನ್ನು ಸೇರಿದಂತೆ ಯಾವುದೇ ತಾರತಮ್ಯ ಯೋಗ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.