ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂದಿನ ದಾರಿ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಇಲ್ಲಿಯವರೆಗೆ 2 ಬಾರಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿರುವ ಮೋದಿ, ನಾಳೆ ಮತ್ತೊಮ್ಮೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಇದೇ ವೇಳೆ ಲಾಕ್ಡೌನ್ ಹಿಂಪಡೆಯುವ ಬಗ್ಗೆಯೂ ಮೋದಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಸರ್ಕಾರದ ಮೂಲಗಳ ಪ್ರಕಾರ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಮುಂದಿನ ದಾರಿ ಬಗ್ಗೆ ಚರ್ಚೆ ನಡೆಯಲಿದ್ದು, ಲಾಕ್ಡೌನ್ ತೆರವು ಮಾಡುವ ಕುರಿತೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈಗಾಗಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಕ್ಷೇತ್ರಗಳಲ್ಲಿ ಲಾಕ್ಡೌನ್ನಿಂದ ವಿನಾಯಿತಿ ಘೋಷಣೆ ಮಾಡಿದ್ದು, ಜನರಿಗೆ ಪರಿಹಾರವನ್ನೂ ಒದಗಿಸಿವೆ. ಅದರೂ, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಕೆಲ ರಾಜ್ಯಗಳು ಮೇ 3ರ ನಂತರವೂ ಲಾಕ್ಡೌನ್ ಮುಂದುವರೆಸುವ ಇಂಗಿತ ಹೊಂದಿವೆ ಎನ್ನಲಾಗಿದೆ.