ETV Bharat / bharat

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಕನ್ನಡದಲ್ಲೇ ಶುಭ ಹಾರೈಸಿದ ಪಿಎಂ

ರಾಜ್ಯದಲ್ಲಿ ನಡೆದ ಎರಡು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಕ್ಕೆ ರಾಜ್ಯ ಘಟಕ ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಅಭಿನಂದನೆ ಸಲ್ಲಿಸಿದ್ದು, ರಾಜ್ಯದ ಜನರ ವಿಶ್ವಾಸಕ್ಕೆ ಧನ್ಯವಾದ ಸಲ್ಲಿಸಿದೆ.

PM wishes in Kannada to Karnataka BJP leaders
ಕನ್ನಡದಲ್ಲೇ ಶುಭ ಹಾರೈಸಿದ ಪಿಎಂ
author img

By

Published : Nov 11, 2020, 4:56 AM IST

Updated : Nov 11, 2020, 9:29 AM IST

ಬೆಂಗಳೂರು: ರಾಜ್ಯದಲ್ಲಿನ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಅದರಲ್ಲೂ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ರಾಜ್ಯ ಸರ್ಕಾರವನ್ನು ಮತ್ತಷ್ಟು ಬಲಪಡಿಸಿವೆ. ಈ ಹಿನ್ನೆಲೆ ಮೋದಿ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.

ಯಡಿಯೂರಪ್ಪ ಸರ್ಕಾರವನ್ನು ಮೋದಿ ಅಭಿನಂದಿಸಿದ್ದಾರೆ. ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್​ ನಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. 'ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃ ದೃಢೀಕರಿಸುತ್ತದೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

  • ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.
    ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ.

    — Narendra Modi (@narendramodi) November 10, 2020 " class="align-text-top noRightClick twitterSection" data=" ">

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ: ದೃಢೀಕರಿಸುತ್ತದೆ.ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

  • ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು.

    ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ @BSYBJP ಜೀ, ಶ್ರೀ @nalinkateel & @BJP4Karnataka ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ.

    ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ.

    — Amit Shah (@AmitShah) November 10, 2020 " class="align-text-top noRightClick twitterSection" data=" ">

ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

  • Thank you Karnataka for your unparalleled support.

    This election clearly reflects Karnataka'a unwavering trust in BJP and Hon PM @narendramodi ji’s leadership.
    Congratulations to CM @BSYBJP ji, State President @nalinkateel ji & every karyakartas of @BJP4Karnataka.

    — Jagat Prakash Nadda (@JPNadda) November 10, 2020 " class="align-text-top noRightClick twitterSection" data=" ">

ನಿಮ್ಮ ಸರಿಸಾಟಿಯಿಲ್ಲದ ಬೆಂಬಲಕ್ಕಾಗಿ ಧನ್ಯವಾದಗಳು. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ರಾಜ್ಯದ ಜನ ವಿಶ್ವಾಸ ಇರಿಸಿರುವುದನ್ನು ಈ ಚುನಾವಣೆ ಪ್ರತಿಬಿಂಬಿಸುತ್ತಿದೆ. ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಕಟೀಲ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟ್ವೀಟ್ ಮಾಡಿದ್ದಾರೆ.

ಇನ್ನು ದೇಶದ ಕೆಲವೆಡೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಜನರ ಬೆಂಬಲ ಹೆಚ್ಚಾಗಿದೆ ಎಂದು ಹೇಳಬಹುದಾಗಿದೆ. ಈ ಕಾರಣದಿಂದಲೇ ಮೋದಿ ಆಯಾ ರಾಜ್ಯದ ಭಾಷೆಗಳಲ್ಲಿಯೇ ಅಲ್ಲಿನ ಕಾರ್ಯಕರ್ತರಿಗೆ ಹಾಗೂ ಬಿಜೆಪಿ ಮುಖಂಡರಿಗೆ ಶುಭ ಹಾರೈಸಿದ್ದಾರೆ.

Last Updated : Nov 11, 2020, 9:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.