ನವದೆಹಲಿ: ಲಡಾಕ್‌ನ ಗಾಲ್ವನ್ ಕಣಿವೆಯಲ್ಲಿ ನಡೆದಿದ್ದ ಹಿಂಸಾತ್ಮಕ ಸಂಘರ್ಷ ಸಂಬಂಧ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಈ ಮಹತ್ವದ ಸಭೆಗೆ ದೆಹಲಿಯಲ್ಲಿ ಅಧಿಕಾರದಲ್ಲಿರುವ ಸಿಎಂ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಹಾಗೂ ಬಿಹಾರದ ಆರ್‌ಜೆಡಿ ಪಕ್ಷಕ್ಕೆ ಆಹ್ವಾನ ನೀಡಿಲ್ಲ.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಆರ್‌ಜೆಡಿ ನಾಯಕ, ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿಯಾದವ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವರ ಬಳಿ ಸರ್ವಪಕ್ಷ ಸಭೆಯನ್ನು ಕರೆಯುವ ಮಾನದಂಡಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.