ನವದೆಹಲಿ: ಬೈಕ್‌ನಲ್ಲಿ ಬಂದು ಕಳ್ಳತನ ಮಾಡಿ ಪರಾರಿಯಾಗುವ ಕಳ್ಳರು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಈ ಸಲ ಪ್ರಧಾನಿ ನರೇಂದ್ರ ಮೋದಿಯವರ ಸೊಸೆಯ ಬ್ಯಾಗ್ ಎಗರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೊಸೆ ದಮಯಂತಿ ಬೆನ್ ಮೋದಿಯವರ ಬ್ಯಾಗ್ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ. ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದಿರುವ ದುಷ್ಕರ್ಮಿಗಳು ದಮಯಂತಿ ಬ್ಯಾಗ್ ಕಸಿದುಕೊಂಡಿದ್ದಾರೆ. ಬ್ಯಾಗ್ನಲ್ಲಿ ಎರಡು ಮೊಬೈಲ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಹಾಗೂ 56 ಸಾವಿರ ನಗದು ರೂ ಇತ್ತು ಎಂದು ತಿಳಿದು ಬಂದಿದೆ.
![PM's niece mugged in Delhi](https://etvbharatimages.akamaized.net/etvbharat/prod-images/collag_1210newsroom_1570886817_254.jpg)
ದಮಯಂತಿ ತಮ್ಮ ಕುಟುಂಬಸ್ಥರೊಂದಿಗೆ ಅಮೃತಸರ ಹಾಗೂ ಧರ್ಮಶಾಲಾ ಸುತ್ತಾಡಿಕೊಂಡು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದರು. ಅವರು ಉಳಿದುಕೊಳ್ಳಲು ಸಿವಿಲ್ ಲೈನ್ನಲ್ಲಿರುವ ಗುಜರಾತಿ ಭವನದಲ್ಲಿ ರೂಂ ಬುಕ್ ಮಾಡಿದ್ದರು. ಬೆಳಗ್ಗೆ 7 ಗಂಟೆಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಕಳ್ಳರು ಕೈಚಳಕ ತೋರಿ ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಕೃತ್ಯದ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ.