ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದುವರೆದಿದೆ. ಇದೀಗ ಚೆನ್ನೈನಲ್ಲಿ ಐವರು ಮಹಿಳೆಯರು ಸೇರಿ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ತಮಿಳುನಾಡಿನ ಹಲವೆಡೆ ರಾಜಕೀಯ ಪಕ್ಷಗಳು ಮತ್ತು ಹಲವು ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.
ಸಿಎಎ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ವಿರೋಧ ವ್ಯಕ್ತಪಡಿಸಲು ಅವರು 'ರಂಗೋಲಿ'ಗಳನ್ನು ಬಳಸಿದರು. ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ, ನಂತರ ಅವರನ್ನು ಬಿಡುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರತಿಭಟನಾಕಾರರು ತಮ್ಮ ಫೋನ್ಗಳನ್ನು ಪೊಲೀಸರು ಕಸಿದುಕೊಂಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕ್ರಮ ಖಂಡಿಸಿ ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಮತ್ತು ಪಕ್ಷದ ಲೋಕಸಭಾ ಸಂಸದ ಕನಿಮೋಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.