ಗ್ರೇಟರ್ ನೋಯ್ಡಾ(ಯುಪಿ): ದೇಶಾದ್ಯಂತ ಲಾಕ್ಡೌನ್ ಹೇರಿಕೆ ಮಾಡಿರುವ ಕಾರಣ ಎಲ್ಲರೂ ಮನೆಯಲ್ಲೇ ಇರಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಇವೆಲ್ಲದರ ನಡುವೆ ಬಿಡುವಿಲ್ಲದೇ ಪೊಲೀಸರು ಕೆಲಸ ನಿರ್ವಹಿಸುತ್ತಿದ್ದಾರೆ. ಇದರಲ್ಲೊಬ್ಬ ಪೊಲೀಸ್ ಪೇದೆ ,ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಿಂದಲೇ ನಮಾಜ್ ಮಾಡಿದ್ದಾರೆ.
ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನದೀಮ್ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಹೇರಿಕೆ ಮಾಡಿರುವ ಕಾರಣ ಮಸೀದಿಗೆ ತೆರಳಿ ನಮಾಜ್ ಮಾಡದಂತಹ ಸ್ಥಿತಿ ನಿರ್ಮಾಣಗೊಂಡಿರುವ ಕಾರಣ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಿಂದಲೇ ಈ ಕಾರ್ಯ ಮಾಡಿದ್ದಾರೆ. ಇವರಿಗೆ ಮತ್ತೊಬ್ಬ ಪೊಲೀಸ್ ಪೇದೆ ಸಹಾಯ ಮಾಡಿದ್ದಾರೆ.
ದೇಶದಲ್ಲಿ ಇದೀಗ ರಂಜಾನ್ ತಿಂಗಳಿರುವ ಕಾರಣ ಮುಸ್ಲಿಂ ಬಾಂಧವರು ಮನೆಯಲ್ಲಿದ್ದುಕೊಂಡು ನಮಾಜ್ ಮಾಡಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಪೊಲೀಸ್ ಪೇದೆ ತಾವು ಕೆಲಸ ಮಾಡ್ತಿದ್ದ ಸ್ಥಳದಿಂದಲೇ ನಮಾಜ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಇವರು ನಮಾಜ್ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆ ಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.