ನವದೆಹಲಿ: ಈಶಾನ್ಯ ದೆಹಲಿಯ ಮೀಟ್ ನಗರ ಪ್ರದೇಶದಲ್ಲಿ ಸೋಮವಾರ ಸಂಜೆ ನಡೆದ ನೆರೆಹೊರೆಯವರ ಜಗಳದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಓರ್ವ ಸೇವಾ ರಿವಾಲ್ವರ್ನಿಂದ ಗುಂಡು ಹಾರಿಸಿದ್ದಾನೆ.
ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರ ಸಂಬಂಧಿ ಹಾಗೂ ನೆರೆಹೊರೆಯವರ ಜೊತೆ ಜಗಳ ಆರಂಭವಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿದಾಗ ಪೊಲೀಸ್ ಪೇದೆ ತನ್ನ ಸೇವಾ ರಿವಾಲ್ವರ್ನಿಂದ ಒಂದೆರಡು ಸುತ್ತು ಗುಂಡು ಹಾರಿಸಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ನಾವು ಎಲ್ಲಾ ರೀತಿಯಲ್ಲೂ ತನಿಖೆ ನಡೆಸಿ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಪೊಲೀಸ್ ಹಿರಿಯ ಅಧಿಕಾರಿಯೋರ್ವರು ಹೇಳಿದ್ದಾರೆ.
ಪ್ರಕರಣ ಹಿನ್ನೆಲೆ ಕಾನ್‌ಸ್ಟೆಬಲ್ ಸೇರಿದಂತೆ ಇತರ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.