ಕೇರಳ: ಎರಡು ತಿಂಗಳ ಶಬರಿಮಲೆ ತೀರ್ಥಯಾತ್ರೆ ಅಂಗವಾಗಿ ಶನಿವಾರ ಸಂಜೆ 5 ಗಂಟೆಗೆ ಅಯ್ಯಪ್ಪ ದೇವಸ್ಥಾನ ಪ್ರವೇಶವನ್ನು ಭಕ್ತರಿಗಾಗಿ ತೆರೆಯಲಾಯಿತು. ಸುಪ್ರೀಂಕೋರ್ಟ್ ತೀರ್ಪಿನ ಆದೇಶದಂತೆ ದೇವಸ್ಥಾನ ಪ್ರವೇಶಿಸಲು ಮುಂದಾದ ಮಹಿಳಾ ಭಕ್ತರಿಗೆ ಈ ಬಾರಿಯೂ ನಿರಾಸೆ ಉಂಟಾಗುವಂತಹ ಘಟನೆ ನಡೆಯಿತು.
ಶಬರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಆಂಧ್ರಪ್ರದೇಶದಿಂದ ಬಂದಿದ್ದ 10 ಮಹಿಳಾ ಭಕ್ತರನ್ನು ಪೊಲೀಸರು ಹಿಂದಕ್ಕೆ ಕಳುಹಿಸಿದ್ದಾರೆ. ಮಹಿಳಾ ಭಕ್ತರು ಪಂಪಾ ನದಿ ತಟದ ಶಿಬಿರದಿಂದ ದೇಗುಲಕ್ಕೆ ತೆರಳಲು ಚಾರಣ ಆರಂಭಿಸಿದ್ದರು. ಅಲ್ಲಿಯೇ ಮಹಿಳಾ ಪೊಲೀಸರು ತಡೆದು ತಪಾಸಣೆ ನಡೆಸಿ, ಗುರುತಿನ ಚೀಟಿ ತೋರಿಸುವಂತೆ ಸೂಚಿಸಿದರು. ಬಳಿಕ ಅಲ್ಲಿಂದಲೇ ಅವರನ್ನು ವಾಪಸ್ ಕಳುಹಿಸಿದ್ದಾರೆ.
-
#WATCH Kerala: Priests open the sanctum sanctorum of the #SabarimalaTemple. pic.twitter.com/wOhQiv1ErZ
— ANI (@ANI) November 16, 2019 " class="align-text-top noRightClick twitterSection" data="
">#WATCH Kerala: Priests open the sanctum sanctorum of the #SabarimalaTemple. pic.twitter.com/wOhQiv1ErZ
— ANI (@ANI) November 16, 2019#WATCH Kerala: Priests open the sanctum sanctorum of the #SabarimalaTemple. pic.twitter.com/wOhQiv1ErZ
— ANI (@ANI) November 16, 2019
ಒಳಗೆ ಬಿಡುವಂತೆ ಮಹಿಳೆಯರು ಒತ್ತಾಯಿಸಿದಾಗ, 10ರಿಂದ 50 ವರ್ಷದೊಳಗಿನ ಮಹಿಳಾ ಭಕ್ತರನ್ನು ದೇವಸ್ಥಾನಕ್ಕೆ ಪ್ರವೇಶಿಸದಂತೆ ಕಠಿಣ ಸೂಚನೆಗಳು ಹೊರಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆಗ ಮಹಿಳೆಯರು ವಿರೋಧ ವ್ಯಕ್ತಪಡಿಸಿ ಹಿಂತಿರುಗಿದ್ದಾರೆ.
ಇದನ್ನೂ ಓದಿ...ಇಂದಿನಿಂದ ಶಬರಿಮಲೆ ದೇಗುಲ ಪ್ರವೇಶಕ್ಕೆ ಮುಕ್ತ, ಆದರೆ ಮಹಿಳೆಯರಿಗೆ ಭದ್ರತೆ ಇದೆಯೇ?
ಮುಟ್ಟಿನ ವಯಸ್ಸಿನ ಮಹಿಳೆಯರಿಗೆ ಪ್ರವೇಶಿಸಲು ಅನುಮತಿ ನೀಡುವ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಗೊಂದಲ ಮುಂದುವರೆದಿದ್ದರೂ, ದೇವಸ್ಥಾನ ಪ್ರವೇಶಿಸಲು ಮಹಿಳೆಯರು ಮುಂದಾದರು.
-
#SabarimalaTemple: Police has sent back 10 women from Pamba. The women (between the age of 10 to 50) had come from Andhra Pradesh to offer prayers at the temple. The temple is schedule to open today in the evening for the Mandala Pooja festival. #Kerala pic.twitter.com/YM17JC5Ogp
— ANI (@ANI) November 16, 2019 " class="align-text-top noRightClick twitterSection" data="
">#SabarimalaTemple: Police has sent back 10 women from Pamba. The women (between the age of 10 to 50) had come from Andhra Pradesh to offer prayers at the temple. The temple is schedule to open today in the evening for the Mandala Pooja festival. #Kerala pic.twitter.com/YM17JC5Ogp
— ANI (@ANI) November 16, 2019#SabarimalaTemple: Police has sent back 10 women from Pamba. The women (between the age of 10 to 50) had come from Andhra Pradesh to offer prayers at the temple. The temple is schedule to open today in the evening for the Mandala Pooja festival. #Kerala pic.twitter.com/YM17JC5Ogp
— ANI (@ANI) November 16, 2019
ಬೆಟ್ಟ ಏರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಮಾರ್ಗ ಮಧ್ಯದಲ್ಲಿ ಜನಸಂದಣಿ ಉಂಟಾಗಿದೆ. ಭದ್ರತೆಗಾಗಿ ನಾವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ. ಯಾರಾದರೂ ತೊಂದರೆ ಸೃಷ್ಟಿಸಲು ಪ್ರಯತ್ನಿಸಿದರೆ ಅಂತಹವರನ್ನು ಸೂಕ್ತ ರೀತಿಯಿಂದ ನಿಭಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕ ಮಹೇಶ್ ಕಂದಾರಾವ್ ಅವರು ಸಂಜೆ 5 ಗಂಟೆಗೆ ದೇವಸ್ಥಾನ ಬಾಗಿಲು ತೆರೆದು ಭಕ್ತರಿಗೆ ಪ್ರವೇಶಕ್ಕೆ ಮುಕ್ತ ಅವಕಾಶ ಮಾಡಿಕೊಟ್ಟರು.