ಗುಜರಾತ್: ಸೂರತ್‌ನಲ್ಲಿ 138 ಬಾಲ ಕಾರ್ಮಿಕರನ್ನು ಪೊಲೀಸರು ಇಂದು ರಕ್ಷಿಸಿದ್ದಾರೆ.
ರಾಜಸ್ಥಾನ ಮೂಲದ ಎನ್‌ಜಿಒವೊಂದರ ಸಮೀಕ್ಷೆಯ ಆಧಾರದ ಮೇಲೆ ರಾಜಸ್ಥಾನ ಮತ್ತು ಗುಜರಾತ್ ಪೊಲೀಸರು 138 ಮಕ್ಕಳನ್ನು ರಕ್ಷಿಸಿದ್ದಾರೆ. ಈ ಮಕ್ಕಳಲ್ಲಿ ಹೆಚ್ಚಿನವರು ರಾಜಸ್ಥಾನ ಮೂಲದವರು ಎಂದು ತಿಳಿದು ಬಂದಿದೆ. ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಅವರನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕೆಲಸಕ್ಕೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳಬಾರದೆಂಬ ನಿಯಮ ಇದ್ದರೂ ಸಹ,ಇಂತಹ ಘಟನೆಗಳು ಬೆಳಕಿಗೆ ಬರುತ್ತಿರುವುದು ನಿಜಕ್ಕೂ ಶೋಚನೀಯ. ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.