ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ 8 ವಿದ್ಯಾರ್ಥಿಗಳ ಬಂಧನ - Sipri Bazar police station

ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯೊಬ್ಬ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು. ಘಟನೆ ನಡೆದ 12 ಗಂಟೆಯೊಳಗಾಗಿ ಕೃತ್ಯ ಎಸಗಿದ 8 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

police-sent-jail-eight-students-of-polytechnic-in-jhansi-for-raping-a-minor-girl
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ 8 ವಿದ್ಯಾರ್ಥಿಗಳ ಬಂಧನ
author img

By

Published : Oct 12, 2020, 7:31 PM IST

ಝಾನ್ಸಿ (ಉ.ಪ್ರ): ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ 8 ವಿದ್ಯಾರ್ಥಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಸಿಪ್ರಿ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿತ್ತು.

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ 8 ವಿದ್ಯಾರ್ಥಿಗಳ ಬಂಧನ

ಘಟನೆ ನಡೆದು 12 ಗಂಟೆಯ ಒಳಗೆ ಕೃತ್ಯ ಎಸಗಿದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಯಾರ ಹೆಸರುಗಳು ಕೇಳಿ ಬಂದಿತ್ತೋ ಅವರನ್ನು ಈವರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾಲಿಟೆಕ್ನಿಕ್​​​​ನಲ್ಲಿ ವ್ಯಾಸಂಗ ಮಾಡುತ್ತಿರುವ ರೋಹಿತ್ ಕುಮಾರ್ ಸೈನಿ, ಭಾರತ್ ಕುಮಾರ್ ಕುಶ್ವಾಹ, ಶೈಲೇಂದ್ರ ನಾಥ ಪಾಠಕ್, ಮಯಾಂಕ್ ಶಿವರೆ, ವಿಪಿನ್ ತಿವಾರಿ, ಮೋನು ಪರಿಯ, ಧರ್ಮೇಂದ್ರ ಸೇನ್ ಮತ್ತು ಸಂಜಯ್ ಕುಶ್ವಾಹ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರ ವಿರುದ್ಧ 120 ಬಿ, 376 ಡಿ, 395, 386, 323, 66 ಐಟಿ ಕಾಯ್ದೆ ಮತ್ತು 3/4 ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಯುಪಿಯಲ್ಲಿ ಮತ್ತೊಂದು ಹೇಯ ಕೃತ್ಯ: ಕಾಲೇಜ್​ ಕ್ಯಾಂಪಸ್​​ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಎಸ್‌ಎಸ್‌ಪಿ ದಿನೇಶ್ ಕುಮಾರ್ ಪ್ರಭು ಪ್ರಕಾರ, ಘಟನೆ ಸಂಬಂಧ ಸಿಪ್ರಿ ಬಜಾರ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆ ಪ್ರಕರಣ ದಾಖಲಾಗಿದೆ. ಇದಲ್ಲದೇ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲ್ಲ ಆರೋಪಿಗಳನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರನ್ನು ಸಂತ್ರಸ್ತೆ ಹಾಗೂ ಆಕೆಯ ಸಹಚರರು ಗುರುತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.