ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೋವಿಡ್ ಸಂಬಂಧ ಎಲ್ಲ ರಾಜ್ಯದ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು, ಇದಕ್ಕೆ ಹಲವು ಕಾರಣಗಳಿವೆ ಅದರಲ್ಲಿ ವಾಯುಮಾಲಿನ್ಯ ಪ್ರಮುಖ ಕಾರಣ ಎಂದರು.
ನವೆಂಬರ್ 10 ರಂದು ದೆಹಲಿಯಲ್ಲಿ 8,600 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಅದೇ ಹೆಚ್ಚಿನ ಸಂಖ್ಯೆಯಾಗಿದೆ. ಅಂದಿನಿಂದ ಇಂದಿನವರೆಗೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಕೇಜ್ರಿವಾಲ್ ಪ್ರಧಾನ ಮಂತ್ರಿಗೆ ತಿಳಿಸಿದರು.
ಚೇತರಿಕೆ ಪ್ರಮಾಣ ಹೆಚ್ಚಿದೆ ಎಂದು ಅಸಡ್ಡೆ ಬೇಡ: ಪ್ರಧಾನಿ ಮೋದಿ ಎಚ್ಚರಿಕೆ
ಮೂರನೇ ಅಲೆಯ ಕೊರೊನಾ ಹೆಚ್ಚಾಗಲು ವಾಯುಮಾಲಿನ್ಯ ಪ್ರಮುಖ ಕಾರಣವಾಗಿದೆ. ಇದಕ್ಕೆ ಪ್ರಮುಖ ಕಾರಣ ಪಕ್ಕದ ರಾಜ್ಯಗಳು ಹೊಲದಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದು. ಮಾಲಿನ್ಯ ನಿಯಂತ್ರಣಕ್ಕೆ ಪ್ರಧಾನಿಯವರು ಮುಂದಾಗಬೇಕು ಎಂದು ಕೇಜ್ರಿವಾಲ್ ಹೇಳಿದರು.
ದೆಹಲಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 1,000 ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗಾಗಿ ಮೀಸಲಿಡಲಾಗಿದೆ. ದೆಹಲಿಯಲ್ಲಿ ಸೋಮವಾರ 4,454 ಕೋವಿಡ್ -19 ಪ್ರಕರಣಗಳು ಪತ್ತೆಯಾಗಿವೆ ಎಂದು ಪ್ರಧಾನಿ ಕೇಜ್ರಿವಾಲ್ ಮಾಹಿತಿ ನೀಡಿದರು.