ETV Bharat / bharat

ಕೊರೊನಾ ರೋಗಿಯ ಮನೆ ಎದುರು ಪೋಸ್ಟರ್​ ಅಂಟಿಸುವ ಅಗತ್ಯವಿಲ್ಲ: ಸುಪ್ರೀಂಕೋರ್ಟ್

ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರದ ನಿರ್ದೇಶನವಿಲ್ಲದಿದ್ದರೆ ರಾಜ್ಯ ಸರ್ಕಾರದ ಅಧಿಕಾರಿಗಳು ಕೊರೊನಾ ರೋಗಿಗಳ ಮನೆಗಳ ಹೊರಗೆ ಪೋಸ್ಟರ್‌ಗಳನ್ನು ಅಂಟಿಸುವುದು, ಅವರ ಗುರುತುಗಳನ್ನು ಬಹಿರಂಗಪಡಿಸುವುದು ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
author img

By

Published : Dec 9, 2020, 1:12 PM IST

ನವದೆಹಲಿ: ಕೊರೊನಾ ರೋಗಿಗಳ ಮನೆ ಎದುರು ಪೋಸ್ಟರ್​ ಅಂಟಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂಬಂಧಿಸಿದ ಪ್ರಾಧಿಕಾರದಿಂದ ನಿರ್ದೇಶನವಿಲ್ಲದಿದ್ದರೆ ರಾಜ್ಯ ಸರ್ಕಾರದ ಅಧಿಕಾರಿಗಳು ಕೊರೊನಾ ರೋಗಿಗಳ ಮನೆಗಳ ಹೊರಗೆ ಪೋಸ್ಟರ್‌ಗಳನ್ನು ಅಂಟಿಸುವುದು, ಅವರ ಗುರುತುಗಳನ್ನು ಬಹಿರಂಗಪಡಿಸುವುದು ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಓದಿ: ‘ಫೆಬ್ರವರಿ ವೇಳೆಗೆ ಕೊವಾಕ್ಸಿನ್ ಸಾರ್ವಜನಿಕ ಬಳಕೆಗೆ ಲಭ್ಯ ಸಾಧ್ಯತೆ’

ನಿರ್ದಿಷ್ಟ ಪ್ರಕರಣಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರ ಮಾತ್ರ ಸೂಚನಾ ಫಲಕ ಅಥವಾ ಪೋಸ್ಟರ್​ ಅಂಟಿಸಬಹುದು. ಈ ಸಂಬಂಧ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸರ್ಕಾರಗಳು ಪಾಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್​.ಎಸ್​.ರೆಡ್ಡಿ, ಎಂ.ಆರ್​.ಶಾ ಅವರನ್ನೊಳಗೊಂಡ ನ್ಯಾಯಪೀಠ ಆದೇಶಿಸಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.