ನವದೆಹಲಿ: ರಾಜಸ್ಥಾನ ಮತ್ತು ಮಧ್ಯಪ್ರದೇಶದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನ ಮತ್ತು ಸದಸ್ಯರ ಹುದ್ದೆಗಳು 2018 ರಿಂದ ಖಾಲಿಯೇ ಇದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ರಾಜ್ಯ ಮಹಿಳಾ ಆಯೋಗ ಆಯಾ ರಾಜ್ಯದ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮಹತ್ವದ ಕಾರ್ಯ ನಿರ್ವಹಿಸುತ್ತದೆ. ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆ, ಶೋಷಣೆಗಳ ವಿರುದ್ಧ ಧ್ವನಿ ಎತ್ತುವ ಕೆಲಸಗಳನ್ನು ಆಯೋಗ ಮಾಡುತ್ತದೆ.
ಮಹಿಳಾ ಆಯೋಗಗಳ ಅಧ್ಯಕ್ಷ ಮತ್ತು ಸದಸ್ಯರ ಹುದ್ದೆಗಳು ಖಾಲಿಯಿರುವ ಬಗ್ಗೆ ರಾಜಸ್ಥಾನ ಮತ್ತು ಮಧ್ಯ ಪ್ರದೇಶದ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಆದರೆ, ಈವರೆಗೂ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮ ತಿಳಿಸಿದರು.
ಅಧಿಕೃತ ಮಾಹಿತಿಯ ಪ್ರಕಾರ, ರಾಜಸ್ಥಾನದಲ್ಲಿ 2018 ರಿಂದ 2019ರ ಜುಲೈವರೆಗೆ ಅತ್ಯಾಚಾರ ಮತ್ತು ಅತ್ಯಾಚಾರ ಯತ್ನ ಸಂಬಂಧಿ 126 ದೂರುಗಳು ಹಾಗೂ ಮಧ್ಯಪ್ರದೇಶದಿಂದ 44 ದೂರುಗಳು ಆಯೋಗಕ್ಕೆ ಬಂದಿವೆ.