ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೋಮಾ ಸ್ಥಿತಿಯಲ್ಲೇ ಇದ್ದಾರೆ. ಆದರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸೇನಾ ಸಂಶೋಧನಾ ಮತ್ತು ರೆಫೆರಲ್ ಆಸ್ಪತ್ರೆಯ ವೈದ್ಯರು ಇಂದು ತಿಳಿಸಿದ್ದಾರೆ.
ಮುಖರ್ಜಿ ಅವರ ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಮೂಲಕ ಉಸಿರಾಟ ನಡೆಸುತ್ತಿದ್ದಾರೆ. ತಜ್ಞರ ತಂಡ ಪ್ರಣಬ್ ಮುಖರ್ಜಿ ಆರೋಗ್ಯ ಕುರಿತಂತೆ ತೀವ್ರ ನಿಗಾವಹಿಸಿದ್ದಾರೆ.
ಮುಖರ್ಜಿ ಅವರನ್ನು ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆದು ಹಾಕಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅಲ್ಲದೇ ಅವರ ಕೊರೊನಾ ರಿಪೋರ್ಟ್ ಕೂಡಾ ಪಾಸಿಟಿವ್ ಬಂದಿತ್ತು. ಶಸ್ತ್ರಚಿಕಿತ್ಸೆ ಬಳಿಕ ಅಂದಿನಿಂದ ಇಂದಿನ ವರೆಗೂ ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.