ETV Bharat / bharat

ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ

author img

By

Published : Aug 19, 2020, 11:29 AM IST

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ ಎಂದು ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಂಡು ಬಂದಿದೆ ಎಂದು ಇಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಭಿಜಿತ್, "ನಿಮ್ಮ ಶುಭ ಹಾರೈಕೆ ಮತ್ತು ವೈದ್ಯರ ಪ್ರಾಮಾಣಿಕ ಪ್ರಯತ್ನದಿಂದ ನನ್ನ ತಂದೆಯ ಅರೋಗ್ಯದ ಸ್ಥಿತಿ ಸ್ಥಿರವಾಗಿದ್ದು, ದೇಹದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.

ಪ್ರಣಬ್ ಮುಖರ್ಜಿ ಅವರನ್ನು ಆ. 10ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆದು ಹಾಕಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ ಕೊರೊನಾ ಪಾಸಿಟಿವ್ ಕೂಡ ದೃಢಪಟ್ಟಿದ್ದು, ನವದೆಹಲಿಯ ಸೇನಾ ಸಂಶೋಧನಾ ಮತ್ತು ರೆಫೆರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.