ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ್ದು, ಶ್ವಾಸಕೋಶದ ಸೋಂಕಿನಿಂದಾಗಿ ಅವರು ಸೆಪ್ಟಿಕ್ ಆಘಾತಕ್ಕೆ ಒಳಗಾಗಿದ್ದಾರೆ ಎಂದು ಸೇನಾ ಸಂಶೋಧನಾ ಮತ್ತು ರೆಫೆರಲ್ ಆಸ್ಪತ್ರೆ ತಿಳಿಸಿದೆ.
ಅವರು ಕೋಮಾದಲ್ಲಿದ್ದು, ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಜ್ಞರ ತಂಡ ಅವರ ಮೇಲೆ ನಿಗಾ ಇರಿಸಿದೆ ಎಂದು ಆಸ್ಪತ್ರೆ ತಿಳಿಸಿದೆ.
ಪ್ರಣಬ್ ಮುಖರ್ಜಿ ಅವರನ್ನು ಆಗಸ್ಟ್ 10ರಂದು ದೆಹಲಿ ಕಂಟೋನ್ಮೆಂಟ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆದು ಹಾಕಲು ಅದೇ ದಿನ ಶಸ್ತ್ರಚಿಕಿತ್ಸೆ ಮಾಡಲಾಯಿತು. ನಂತರ ಅವರಿಗೆ ಶ್ವಾಸಕೋಶದ ಸೋಂಕು ತಗುಲಿತ್ತು.
"ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಕುಸಿತ ಕಂಡು ಬಂದಿದೆ. ಅವರು ಶ್ವಾಸಕೋಶದ ಸೋಂಕಿನಿಂದಾಗಿ ಸೆಪ್ಟಿಕ್ ಆಘಾತಕ್ಕೆ ಒಳಗಾಗಿದ್ದಾರೆ. ತಜ್ಞರ ತಂಡದಿಂದ ಅವರಿಗೆ ಚಿಕಿತ್ಸೆ ನಿಡಲಾಗುತ್ತಿದೆ. ಅವರು ಕೋಮಾ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ" ಎಂದು ಆಸ್ಪತ್ರೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.