ETV Bharat / bharat

ಹರ್​​ಸಿಮ್ರತ್​​ ಕೌರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

author img

By

Published : Sep 18, 2020, 8:34 AM IST

ಕೃಷಿ ಮಸೂದೆಗಳನ್ನು ವಿರೋಧಿಸಿ ಸಚಿವೆ ಹರ್​​ಸಿಮ್ರತ್​ ಕೌರ್ ಬಾದಲ್ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.

President accepts Harsimrat Kaur Badal's resignation
ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಅಂಗೀಕಾರ

ನವದೆಹಲಿ: ಪ್ರಧಾನಿ ಅವರ ಸಲಹೆಯಂತೆ ರಾಷ್ಟ್ರಪತಿ ರಾಮ​ನಾಥ್ ಕೋವಿಂದ್ ಅವರು ಕೇಂದ್ರ ಸಚಿವೆ ಹರ್​​ಸಿಮ್ರತ್​ ಕೌರ್ ಬಾದಲ್ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.

ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವಾಲಯದ ಉಸ್ತುವಾರಿಯನ್ನು ಕ್ಯಾಬಿನೆಟ್ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ವಹಿಸಲು ರಾಷ್ಟ್ರಪತಿಗಳು ನಿರ್ದೇಶಿಸಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ನರೇಂದ್ರ ಮೋದಿ ಸರ್ಕಾರದಲ್ಲಿದ್ದ ಅಕಾಲಿ ದಳದ ಏಕೈಕ ಸಚಿವೆ ಗುರುವಾರ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಈ ಬಗ್ಗೆ ಮಾತನಾಡಿರುವ ಹರ್​​ಸಿಮ್ರತ್​​ ಕೌರ್ ಬಾದಲ್, ‘ಮೇ ತಿಂಗಳಲ್ಲಿ ಈ ಸುಗ್ರೀವಾಜ್ಞೆಗಳನ್ನು ಕೈಗೆತ್ತಿಕೊಳ್ಳಲಾಯಿತು ಮತ್ತು ಹಲವಾರು ಸಮಸ್ಯೆಗಳನ್ನು ಎತ್ತಲಾಯಿತು. ನಾನು ಆಹಾರ ಸಂಸ್ಕರಣಾ ಉದ್ಯಮವನ್ನು ನೋಡಿಕೊಳ್ಳುತ್ತಿದ್ದೆ ಮತ್ತು ಈ ಸುಗ್ರೀವಾಜ್ಞೆಗಳು ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ಅನುಕೂಲಕರವಾಗಿವೆ. ಆದರೆ ಎಪಿಎಂಸಿ ಮತ್ತು ರೈತರ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಅರಿತುಕೊಂಡೆ’ ಎಂದು ಹೇಳಿದ್ದಾರೆ.

‘ಪಕ್ಷದ ನಿಯೋಗವೊಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ವಿನಂತಿಸಿತ್ತು. ಅಧಿವೇಶನದ ಆರಂಭಿಕ ದಿನಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಮತ್ತು ಮಸೂದೆಗಳನ್ನು ಮಂಡಿಸಲಾಯಿತು. ಈಗ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಮತ್ತು ಪಂಜಾಬ್‌ನ ಮಗಳಾಗಿ ನಾನು ನನ್ನ ರೈತರ ಹೋರಾಟದಲ್ಲಿ ನಿಲ್ಲುತ್ತೇನೆ’ ಎಂದು ಹೇಳಿದ್ದಾರೆ.

ಹರ್​​ಸಿಮ್ರತ್​ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ), ಪಂಜಾಬ್‌ನ ಸ್ಥಳೀಯ ರಾಜಕಾರಣದ ಒತ್ತಡದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ. ಆದರೆ ಶಿರೋಮಣಿ ಅಕಾಲಿ ದಳದೊಂದಿಗೆ ಚರ್ಚಿಸಿದ ನಂತರ ಈ ವಿಷಯ ಬಗೆಹರಿಯಲಿದೆ ಎಂದು ಪಕ್ಷ ತಿಳಿಸಿದೆ.

ಹರ್​ಸಿಮ್ರತ್​​​ ಅವರು ರಾಜೀನಾಮೆ ನೀಡಿದ್ದರೂ ಶಿರೋಮಣಿ ಅಕಾಲಿ ದಳ-ಬಿಜೆಪಿ ಮೈತ್ರಿ ಮುಂದುವರೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.