ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕೃಷಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ದೊರಕಿದ ಬಳಿಕ, ವಿಧೇಯಕವನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿ ಕೊಡಲಾಗಿತ್ತು.
ಕೇಂದ್ರದ ಉದ್ದೇಶಿತ ಕೃಷಿ ಮಸೂದೆ ವಿರೋಧಿಸಿ ಪಂಜಾಬ್, ಹರಿಯಾಣ ಸೇರಿದಂತೆ ದೇಶದಾದ್ಯಂತ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ವಿಪಕ್ಷಗಳೂ ಈ ವಿಧೇಯಕ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿದ್ದವು.
ಇನ್ನು ಕೃಷಿ ವಿಧೇಯಕವನ್ನು ಎನ್‌ಡಿಎ ಅಂಗಪಕ್ಷ ಶಿರೋಮಣಿ ಅಕಾಲಿ ದಳ ತೀವ್ರವಾಗಿ ವಿರೋಧಿಸಿ, ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿತ್ತು. ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಶಿರೋಮಣಿ ಅಕಾಲಿ ದಳದ ನಾಯಕರು, ಕೃಷಿ ಮಸೂದೆಗೆ ಅಂಕಿತ ಹಾಕಬಾರದು ಎಂದು ಮನವಿ ಸಲ್ಲಿಸಿದ್ದರು.