ETV Bharat / bharat

ಭಿವಂಡಿ ಕಟ್ಟಡ ಕುಸಿತ ದುರಂತ: ಸಂತಾಪ ಸೂಚಿಸಿದ ರಾಷ್ಟ್ರಪತಿ, ಪ್ರಧಾನಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

building collapse incident in Maharashtra's Bhiwandi
ರಾಷ್ಟ್ರಪತಿ, ಪ್ರಧಾನಿ
author img

By

Published : Sep 21, 2020, 11:32 AM IST

Updated : Sep 21, 2020, 11:51 AM IST

ನವದೆಹಲಿ: ಕನಿಷ್ಠ 10 ಮಂದಿಯನ್ನು ಬಲಿ ಪಡೆದ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಪಿಎಂ ಮೋದಿ, "ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತ ವಿಚಾರ ಕೇಳಿ ನೋವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾ, ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

  • Saddened by the building collapse in Bhiwandi, Maharashtra. Condolences to the bereaved families. Praying for a quick recovery of those injured. Rescue operations are underway and all possible assistance is being provided to the affected.

    — Narendra Modi (@narendramodi) September 21, 2020 " class="align-text-top noRightClick twitterSection" data=" ">

"ಭಿವಂಡಿಯಲ್ಲಿ ಕಟ್ಟಡ ಕುಸಿತ ಘಟನೆಯಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ಬಹಳ ದುಃಖಕರ ಸಂಗತಿಯಾಗಿದೆ. ಈ ನೋವಿನ ಸಂದರ್ಭದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರಿಗೆ ಮುಡಿಪು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೇಡಿಕೊಳ್ಳುತ್ತೇನೆ. ಸ್ಥಳೀಯ ಅಧಿಕಾರಿಗಳು ಸಹ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗೆ ಕೈ ಜೋಡಿಸಿದ್ದಾರೆ" ಎಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಟ್ವೀಟ್​ ಮಾಡಿದ್ದಾರೆ.

  • The loss of lives in the building collapse at Bhiwandi, Maharashtra is quite distressing. In this hour of grief, my thoughts and prayers are with the accident victims. I wish speedy recovery of the injured. Local authorities are coordinating rescue and relief efforts.

    — President of India (@rashtrapatibhvn) September 21, 2020 " class="align-text-top noRightClick twitterSection" data=" ">

ಇಂದು ಬೆಳಗಿನ ಜಾವ 3:20ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಅವಶೇಷಗಳಡಿಯಲ್ಲಿ 20ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ. ಪೊಲೀಸರು, ಸ್ಥಳೀಯ ಅಧಿಕಾರಿಗಳು ಹಾಗೂ ಎನ್​ಡಿಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

Last Updated : Sep 21, 2020, 11:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.