ETV Bharat / bharat

ರಾಜ್ಯಸಭೆಗೆ ನಿವೃತ್ತ ಸಿಜೆಐ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ...! - ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್

ಸುಪ್ರಿಂ ಕೋರ್ಟ್​​​ನ ಮಾಜಿ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಆದೇಶಸಿದ್ದಾರೆ. ಈ ಕುರಿತಾಗಿ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ

rajya-sabha
ರಂಜನ್​ ಗೊಗೊಯ್
author img

By

Published : Mar 16, 2020, 9:47 PM IST

ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಅವರು, ಸುಪ್ರಿಂಕೋರ್ಟ್​​​ನ ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತಾಗಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆಯನ್ನು ಹೊರಡಿಸಿದೆ.

rajya-sabha
ರಂಜನ್​ ಗೊಗೊಯ್​ರನ್ನ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ

2019 ನವೆಂಬರ್ 17ರಂದು ನಿವೃತ್ತರಾದ ಇವರು, ರಾಜಕೀಯ ಮತ್ತು ಧಾರ್ಮಿಕವಾಗಿ ಸೂಕ್ಷ್ಮವಾದ ಅಯೋಧ್ಯಾ ಭೂ ವಿವಾದದ ತೀರ್ಪು ಪ್ರಕಟಿಸಿದ್ದರು. ಅಷ್ಟೇ ಅಲ್ಲದೆ, ಈಶಾನ್ಯ ಭಾಗದಿಂದ ನ್ಯಾಯಾಂಗದ ಉನ್ನತ ಸ್ಥಾನವನ್ನು ತಲುಪಿದ ಮೊದಲ ವ್ಯಕ್ತಿ ಎಂಬ ಕೀರ್ತಿಗೆ ಗೊಗೋಯ್​ ಪಾತ್ರರಾಗಿದ್ದರು.

ರಂಜನ್ ಗೊಗೊಯ್ ಅವರು 2019ರ ನವೆಂಬರ್ 17ರಂದು ನಿವೃತ್ತರಾಗಿದ್ದಾರೆ. 2001ರಲ್ಲಿ ಗುವಾಹಟಿಯ ಹೈಕೋರ್ಟ್​ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡು ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು. ಬಳಿಕ ಪಂಜಾಬ್​ ಹಾಗೂ ಹರಿಯಾಣದ ನ್ಯಾಯಾಂಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.