ETV Bharat / bharat

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ ಕಾರ್ಯಕ್ರಮ: ಬೆಳಗ್ಗೆ 11 ಗಂಟೆಗೆ ಮೋದಿ ಮಾತು - ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಭಾಗವಹಿಸಲಿದ್ದಾರೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ
author img

By

Published : Dec 22, 2020, 7:21 AM IST

ನವದೆಹಲಿ: ಇಂದು ನಡೆಯಲಿರುವ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ವಿವಿಯ ಕುಲಪತಿ​ ಸಯ್ಯದ್​ ಮಫದುಲ್​ ಸಫಿವುದ್ದೀನ್‌​ ಹಾಗೂ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಅಲಿಗಢ ವಿವಿಯ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ವಿವಿಯ ಕುರಿತು ಒಂದಿಷ್ಟು ಮಾಹಿತಿ:

ಕೇಂದ್ರೀಯ ವಿಶ್ವವಿದ್ಯಾಲಯವು ಉತ್ತರ ಪ್ರದೇಶದ ಅಲಿಗಢದಲ್ಲಿದ್ದು, 467.6 ಎಕರೆ ವಿಸ್ತೀರ್ಣ ಹೊಂದಿದೆ. ಕೇರಳದ ಮಲಪ್ಪುರಂ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌-ಜಂಗಿಪುರ ಹಾಗು ಬಿಹಾರದ ಕಿಶನ್‌ ಗಂಜ್‌ನಲ್ಲಿ ಕ್ಯಾಂಪಸೇತರ ಕೇಂದ್ರಗಳನ್ನು ಹೊಂದಿದೆ.

ಓದಿ: ಇಂದು ಹೊರ ಬೀಳಲಿದೆ ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆ ಫಲಿತಾಂಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.