ಶ್ರೀಕಾಕುಳಂ (ಆಂಧ್ರ ಪ್ರದೇಶ): ಬೆಂಗಳೂರಿನಿಂದ ಕೋಲ್ಕತ್ತಾಗೆ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸೊಂದು ಶ್ರೀಕಾಕುಳಂ ಜಿಲ್ಲೆಯ ಮಂಡಸಾ ಬಳಿ ಪಲ್ಟಿಯಾಗಿದೆ.
ಬಸ್ ಪಲ್ಟಿಯಾದ ಪರಿಣಾಮ 10 ಮಂದಿ ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.