ಚೆನ್ನೈ(ತಮಿಳುನಾಡು): ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರುದ್ಧ ಚೆನ್ನೈನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಮದ್ರಾಸ್ ಹೈಕೋರ್ಟ್ ಬಳಿ ತಮಿಳುನಾಡು ತೌಹೀದ್ ಜಮಾಅತ್ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.