ETV Bharat / bharat

ಪುದುಚೆರಿ ಸಿಎಂ ಕಚೇರಿ ಸಿಬ್ಬಂದಿಗೆ ಕೊರೊನಾ: 2 ದಿನ ಕಚೇರಿ ಬಂದ್​ - ಪುದುಚೆರಿ ಸಿಎಂ ಕಚೇರಿ ಸಿಬ್ಬಂದಿಗೆ ಕೊರೊನಾ

ತಮ್ಮ ಸಿಬ್ಬಂದಿಯೊಬ್ಬರಿಗೆ ಕೋವಿಡ್​ 19 ದೃಢವಾಗಿರುವ ಹಿನ್ನೆಲೆ ಕಚೇರಿಯನ್ನು 2 ದಿನಗಳ ಕಾಲ ಬಂದ್ ಮಾಡುವುದಾಗಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಹೇಳಿದ್ದಾರೆ.

CM's office to be shut after staff gets infected by COVID-19
ಪುದುಚೆರಿ ಸಿಎಂ ಕಚೇರಿ ಸಿಬ್ಬಂದಿಗೆ ಕೊರೊನಾ: 2 ದಿನಗಳ ಕಾಲ ಕಚೇರಿ ಬಂದ್​
author img

By

Published : Jun 27, 2020, 8:35 PM IST

ಪುದುಚೆರಿ: ತಮ್ಮ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೋವಿಡ್​-19 ದೃಢವಾಗಿರುವ ಹಿನ್ನೆಲೆ ಕಚೇರಿಯನ್ನು 2 ದಿನಗಳ ಕಾಲ ಬಂದ್ ಮಾಡುವುದಾಗಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಹೇಳಿದ್ದಾರೆ.

ಶಂಕಿತ ವ್ಯಕ್ತಿಯನ್ನು ಶುಕ್ರವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 24 ಗಂಟೆಗಳಲ್ಲಿ ನಡೆದ ಮಾದರಿಗಳ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್​ ಆಗಿ ದೃಢಪಟ್ಟಿರುವ 87 ಜನರಲ್ಲಿ ಈ ಸಿಬ್ಬಂದಿಯೂ ಒಬ್ಬರು ಎಂದು ಮುಖ್ಯಮಂತ್ರಿಗಳು ವಿಡಿಯೋ ಸಂದೇಶದ ಮೂಲಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಸದ್ಯ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ತಮ್ಮ ಕಚೇರಿಗೆ ಸೋಂಕು ನಿವಾರಕ ಸಿಂಪಡಿಸಿ ಶುಚಿಮಾಡಲಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಕಚೇರಿಗೆ ಭೇಟಿ ನೀಡುವುದು ಬೇಡ ಎಂದು ಸಿಎಂ ನಾರಾಯಣಸಾಮಿ ಮನವಿ ಮಾಡಿದ್ದಾರೆ.

ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ವೈರಸ್‌ ಸೋಂಕಿತರ ಒಟ್ಟು ಸಂಖ್ಯೆ 619 ಆಗಿದ್ದು, ಸಾವಿನ ಸಂಖ್ಯೆ 10 ಕ್ಕೆ ತಲುಪಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.