ETV Bharat / bharat

ಹುತಾತ್ಮ ಯೋಧರ ಕುಟುಂಬಕ್ಕೆ ಪಂಜಾಬ್​, ಪ.ಬಂಗಾಳದಿಂದ ಪರಿಹಾರ ಘೋಷಣೆ

author img

By

Published : Jun 17, 2020, 7:45 PM IST

ಲಡಾಖ್​ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, ವೀರ ಯೋಧರ ಕುಟುಂಬಗಳಿಗೆ ವಿವಿಧ ರಾಜ್ಯ ಸರ್ಕಾರ ಶ್ರದ್ಧಾಂಜಲಿ ಸಲ್ಲಿಕೆ ಮಾಡುತ್ತಿವೆ.

Galwan martyrs
Galwan martyrs

ಹೈದರಾಬಾದ್​: ಚೀನಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪಂಜಾಬ್​ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದ್ದು, ಇದೇ ವೇಳೆ ವೀರ ಯೋಧರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿವೆ.

ಲಡಾಖ್​ನ ಗಲ್ವಾನ್​ ಕಣಿವೆ ಭಾಗದಲ್ಲಿ ನಡೆದ ಭಾರತ - ಚೀನಾ ನಡುವಿನ ಸಂಘರ್ಷದಲ್ಲಿ ಹುತಾತ್ಮರಾದ ಪಶ್ಚಿಮ ಬಂಗಾಳದ ಇಬ್ಬರು ಯೋಧರ ಕುಟುಂಬಕ್ಕೆ ಅಲ್ಲಿನ ಸರ್ಕಾರ ತಲಾ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ತಿಳಿಸಿದೆ.

ಇದೇ ವೇಳೆ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಮ್ಮ ದೇಶದ ಬಗ್ಗೆ ಹೆಮ್ಮೆ ಇದೆ. ನಾವು ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ ಎಂದಿದ್ದು, ಜೂನ್​ 19ರಂದು ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.

ಪಂಜಾಬ್​ ಸರ್ಕಾರದಿಂದ ಪರಿಹಾರ

ಸಂಘರ್ಷದಲ್ಲಿ ಹುತಾತ್ಮರಾಗಿರುವ ನಾಲ್ವರು ವೀರ ಯೋಧರ ಕುಟುಂಬಗಳಿಗೆ ಪಂಜಾಬ್​​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ 12 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜತೆಗೆ ಸರ್ಕಾರಿ ಕೆಲಸ ನೀಡುವುದಾಗಿ ತಿಳಿಸಿದ್ದಾರೆ.

ಈಗಾಗಲೇ ತಮಿಳುನಾಡಿನ ಸಿಎಂ ಕೆ. ಪಳನಿಸ್ವಾಮಿ ಹುತಾತ್ಮ ಮೂವರು ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಕುಟುಂಬಕ್ಕೆ ತಕ್ಷಣವೇ 20 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.