ನವದೆಹಲಿ : ಕೇಂದ್ರ ಸರ್ಕಾರದ ಆಡಳಿತ ವೈಖರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರಣಿ ವಿಡಿಯೋಗಳನ್ನು ಟ್ವಿಟರ್ನಲ್ಲಿ ಹರಿಬಿಟ್ಟಿದ್ದಾರೆ.
ತಮ್ಮ ವಿಡಿಯೋ ಸರಣಿಯ 'ಅರ್ಥ್ ವ್ಯವಸ್ಥಾ ಕಿ ಬಾತ್' (ಆರ್ಥಿಕತೆ ಬಗ್ಗೆ ಮಾತನಾಡೋಣ)ನ ಮೊದಲ ಸಂಚಿಕೆಯನ್ನು ಸಾಮಾಜಿಕ ವೇದಿಕೆಯಲ್ಲಿ ಬಿಡುಗಡೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಭಾರತವು ಉದ್ಯೋಗವನ್ನು ಸೃಷ್ಟಿಸಲು ಸಾಧ್ಯವಾಗದ ಕಾರಣ ಅನೌಪಚಾರಿಕ ವಲಯದ ಮೇಲಿನ ದಾಳಿ ಶೀಘ್ರದಲ್ಲೇ ಕಾಣಲಿದೆ ಎಂದು ರಾಹುಲ್ ಆತಂಕ ವ್ಯಕ್ತಪಡಿಸಿದ್ದಾರೆ.
-
जो आर्थिक त्रासदी देश झेल रहा है उस दुर्भाग्यपूर्ण सच्चाई की आज पुष्टि हो जाएगी: भारतीय अर्थव्यवस्था 40 वर्षों में पहली बार भारी मंदी में है।
— Rahul Gandhi (@RahulGandhi) August 31, 2020 " class="align-text-top noRightClick twitterSection" data="
‘असत्याग्रही’ इसका दोष ईश्वर को दे रहे हैं।
सच जानने के लिए मेरा वीडियो देखें। pic.twitter.com/sDNV6Fwqut
">जो आर्थिक त्रासदी देश झेल रहा है उस दुर्भाग्यपूर्ण सच्चाई की आज पुष्टि हो जाएगी: भारतीय अर्थव्यवस्था 40 वर्षों में पहली बार भारी मंदी में है।
— Rahul Gandhi (@RahulGandhi) August 31, 2020
‘असत्याग्रही’ इसका दोष ईश्वर को दे रहे हैं।
सच जानने के लिए मेरा वीडियो देखें। pic.twitter.com/sDNV6Fwqutजो आर्थिक त्रासदी देश झेल रहा है उस दुर्भाग्यपूर्ण सच्चाई की आज पुष्टि हो जाएगी: भारतीय अर्थव्यवस्था 40 वर्षों में पहली बार भारी मंदी में है।
— Rahul Gandhi (@RahulGandhi) August 31, 2020
‘असत्याग्रही’ इसका दोष ईश्वर को दे रहे हैं।
सच जानने के लिए मेरा वीडियो देखें। pic.twitter.com/sDNV6Fwqut
ಕಳೆದ 6 ವರ್ಷಗಳಿಂದ ಅನೌಪಚಾರಿಕ ವಲಯವನ್ನು ಕೇಂದ್ರ ಸರ್ಕಾರ ನಾಶಪಡಿಸುತ್ತಿದೆ. ನೋಟು ರದ್ಧತಿ, ಸರಕು ಮತ್ತು ಸೇವಾ ತೆರಿಗೆಯಿಂದಾದ ತಪ್ಪುಗಳಿಂದ ಹಾಗೂ ಲಾಕ್‌ಡೌನ್ ಹಿನ್ನೆಲೆಯಿಂದಾಗಿ ಅನೌಪಚಾರಿಕ ವಲಯಗಳನ್ನು ನಾಶಪಡಿಸಿದ್ದು, ಜನರನ್ನು ಗುಲಾಮರನ್ನಾಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೋಟ್ ಬ್ಯಾನ್, ಜಿಎಸ್‌ಟಿ ಹಾಗೂ ಲಾಕ್‌ಡೌನ್ ಇವು ಕೇಂದ್ರ ಸರ್ಕಾರ ಮಾಡಿದ ದೊಡ್ಡ ತಪ್ಪು. ಯಾವುದೇ ರೀತಿಯ ಮುಂದಾಲೋಚನೆ, ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳದೆ ಈ ಕೆಲಸಗಳನ್ನು ಮೋದಿ ನೇತೃತ್ವದ ಸರ್ಕಾರ ಮಾಡಿದೆ. ಇಂತಹ ಪ್ರಮಾದದಿಂದ ಕೋಟ್ಯಂತರ ಕಾರ್ಮಿಕರನ್ನು ಸಂಕಷ್ಟದ ಸುಳಿಗೆ ತಳ್ಳುತ್ತಿದೆ ಎಂದು ಟ್ವೀಟ್‌ನಲ್ಲಿ ಗುಡುಗಿದ್ದಾರೆ.
ಸರಣಿ ಟ್ವೀಟ್‌ನಲ್ಲಿ ಮೋದಿ ಸರ್ಕಾರ ದೇಶದ ಆರ್ಥಿಕತೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯುತ್ತಿದೆ. ಇನ್ನು, ಅಸಂಘಟಿತ ವಲಯಕ್ಕೆ ಹೆಚ್ಚು ಉತ್ತೇಜನ ನೀಡಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.