ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಲಸೆ ಕಾರ್ಮಿಕರ ಸಮಸ್ಯೆಗಳೊಂದಿಗೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ ಜಿವಿಎಸ್ ನರಸಿಂಹರಾವ್, ಗಾಂಧಿ ಕುಟುಂಬವು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಾದ ಚತ್ತೀಸ್ಗಢ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ವಲಸೆ ಕಾರ್ಮಿಕರಿಗಾಗಿ ಏನು ಮಾಡಿಲ್ಲ. ಕನಿಷ್ಠ ಪಕ್ಷ ಅವರಿಗೆ ಊರಿಗೆ ತೆರಳಲು ಅವಕಾಶ ನೀಡಿಲ್ಲ. ರಾಹುಲ್ ಗಾಂಧಿ ಕ್ಯಾಮರ ರಾಜಕಾರಣದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಆಡಳಿದಲ್ಲಿದ್ದ ರಾಜ್ಯಗಳಿಗೆ ಭೇಟಿ ನೀಡಿ ಅವರು ವಲಸಿಗರನ್ನು ಮಾತನಾಡಿಸುತ್ತಿದ್ದಾರೆ, ಈ ಮೂಲಕ ಕಣ್ಣೀರಿನ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ವಾರ ರಾಹುಲ್ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಮಾತನಾಡುತ್ತಿರುವ ಸಾಕ್ಷ್ಯ ಚಿತ್ರವೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆ ಬಳಿಕ ಬಿಜೆಪಿ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಲು ಶುರು ಮಾಡಿದೆ.