ಹೊಸದಿಲ್ಲಿ: ಲಾಕ್ಡೌನ್ ಮಧ್ಯೆ ಹಿಂಗಾರು ಬೆಳೆ ಕಟಾವು ಮಾಡಲು ರೈತರಿಗೆ ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರಕ್ಕೆ ಆಗ್ರಹಿಸಿದ್ದಾರೆ.
"ಹಿಂಗಾರು ಬೆಳೆ ಕಟಾವಿಗೆ ಬಂದಿದೆ. ಆದರೆ, ಲಾಕ್ಡೌನ್ ಇರುವುದರಿಂದ ಬೆಳೆ ಕಟಾವು ಮಾಡಲು ರೈತರಿಗೆ ಸಮಸ್ಯೆಯಾಗುತ್ತಿದೆ. ಕೋಟ್ಯಂತರ ರೈತರ ಜೀವನೋಪಾಯ ಕುಸಿಯುವ ಹಂತಕ್ಕೆ ಬಂದಿದೆ. ದೇಶಕ್ಕೆ ಅನ್ನ ನೀಡುವ ರೈತನಿಂದು ದುಪ್ಪಟ್ಟು ಕಷ್ಟ ಅನುಭವಿಸಬೇಕಾಗಿ ಬಂದಿದೆ. ಇಂಥ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರದ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಬೆಳೆ ಕಟಾವಿಗೆ ಅನುವು ಮಾಡಿಕೊಡಬೇಕೆಂದು" ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇತರ ದೇಶಗಳಿಗಿಂತ ಭಾರತದ ಸ್ಥಿತಿ ಭಿನ್ನವಾಗಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮತೆಯಿಂದ ನಿಭಾಯಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಈ ಮುಂಚೆ ಹೇಳಿದ್ದರು.