ನವದೆಹಲಿ : ಮುಂದಿನ ವರ್ಷ ಉಭಯ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಿಳುನಾಡು ಮತ್ತು ಅಸ್ಸೋಂನಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಇಂದು ವರ್ಚುವಲ್ ಸಭೆ ನಡೆಸಲಿದ್ದಾರೆ.
ಅಸ್ಸೋಂನಲ್ಲಿ ಪಕ್ಷದ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮುಂದಿನ ವರ್ಷ ಚುನಾವಣೆ ಬಳಿಕ ರಾಜ್ಯದಲ್ಲಿ ಸರ್ಕಾರ ರಚಿಸುವುದಾಗಿ ಹೇಳಿದೆ.
ಮುಂದಿನ ವರ್ಷ ಈ ಎರಡು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಮಿಳು ತಮಿಳುನಾಡು ಮತ್ತು ಅಸ್ಸೋಂ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಇಂದು ಮಹತ್ವದ ಮಾತುಕತೆ ನಡೆಸಲಿದ್ದಾರೆ.