ನವದೆಹಲಿ: ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನಿರ್ಧಾರ ಹಾಗೂ ಅದರ ಮಾರ್ಗಸೂಚಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧಿಸಿದ್ದಾರೆ.
ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಸಂದೇಶ ನೀಡಿರುವ ರಾಗಾ, ಪರೀಕ್ಷೆಗಳನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಹಿಂದಿನ ಚಟುವಟಿಕೆಗಳ ಆಧಾರದ ಮೇಲೆ ಅವರನ್ನು ಉತ್ತೀರ್ಣರನ್ನಾಗಿ ಮಾಡಬೇಕೆಂದು ಯುಜಿಸಿಗೆ ಆಗ್ರಹಿಸಿದ್ದಾರೆ.
ಕೊರೊನಾ ವೈರಸ್ ಬಹಳಷ್ಟು ಜನರಿಗೆ ಸಮಸ್ಯೆ ತಂದೊಡ್ಡಿದೆ. ಇದರಿಂದಾಗಿ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಐಐಟಿಗಳು ಮತ್ತು ಇತರ ಕಾಲೇಜುಗಳು ಪರೀಕ್ಷೆಗಳನ್ನು ರದ್ದುಗೊಳಿಸಿ ತಮ್ಮ ವಿದ್ಯಾರ್ಥಿಗಳಿಗೆ ಬಡ್ತಿ ನೀಡಿವೆ. ಆದರೆ ಯುಜಿಸಿ ಮಾತ್ರ ಪರೀಕ್ಷೆ ನಡೆಸುವುದಾಗಿ ಹೇಳಿ ಗೊಂದಲವನ್ನು ಸೃಷ್ಟಿಸುತ್ತಿದೆ. ಕೋವಿಡ್ ಬಿಕ್ಕಟ್ಟಿನ ನಡುವೆ ಪರೀಕ್ಷೆಗಳು ಅಪ್ರಸ್ತುತ. ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರ ದನಿಯನ್ನು ಯುಜಿಸಿ ಕೇಳಬೇಕಿದೆ ಎಂದು ಕೈ ನಾಯಕ ಒತ್ತಾಯಿಸಿದ್ದಾರೆ.
-
It is extremely unfair to conduct exams during the Covid19 pandemic.
— Rahul Gandhi (@RahulGandhi) July 10, 2020 " class="align-text-top noRightClick twitterSection" data="
UGC must hear the voice of the students and academics. Exams should be cancelled and students promoted on basis of past performance.#SpeakUpForStudents pic.twitter.com/1TYY3q58i0
">It is extremely unfair to conduct exams during the Covid19 pandemic.
— Rahul Gandhi (@RahulGandhi) July 10, 2020
UGC must hear the voice of the students and academics. Exams should be cancelled and students promoted on basis of past performance.#SpeakUpForStudents pic.twitter.com/1TYY3q58i0It is extremely unfair to conduct exams during the Covid19 pandemic.
— Rahul Gandhi (@RahulGandhi) July 10, 2020
UGC must hear the voice of the students and academics. Exams should be cancelled and students promoted on basis of past performance.#SpeakUpForStudents pic.twitter.com/1TYY3q58i0
ಸೆಪ್ಟೆಂಬರ್ನಲ್ಲಿ ಪರೀಕ್ಷೆ ನಡೆಸುವ ಯುಜಿಸಿ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನುಮೋದನೆ ನೀಡಿದೆ. ಈ ಸಂಬಂಧ ಯುಜಿಸಿ ಬಿಡುಗಡೆ ಮಾಡಿದ ಪರಿಷ್ಕೃತ ಮಾರ್ಗಸೂಚಿಗಳ ವಿರುದ್ಧ ರಾಹುಲ್ ಗಾಂಧಿ 'ಸ್ಪೀಕ್ ಅಪ್ ಫಾರ್ ಸ್ಟುಡೆಂಟ್ಸ್' (#SpeakUpForStudents) ಎಂಬ ಅಭಿಯಾನ ಆರಂಭಿಸಿದ್ದು, ಅದರ ಭಾಗವಾಗಿ ಈ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದು ಮಾಡುವಂತೆ, ಮುಂದಿನ 6 ತಿಂಗಳವರೆಗೆ ತಮ್ಮ ಶುಲ್ಕವನ್ನು ಮನ್ನಾ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.