ETV Bharat / bharat

ಕಾಂಗ್ರೆಸ್​ನದು ಮೃದು ಹಿಂದುತ್ವ ಧೋರಣೆ: ಕೇರಳ ಸಿಎಂ ಪಿಣರಾಯಿ ವಿಜಯನ್​

ಕಾಂಗ್ರೆಸ್ ಮೃದು ಹಿಂದುತ್ವ ಧೋರಣೆಗೆ ಹೆಸರುವಾಸಿಯಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್​ ಟೀಕಿಸಿದ್ದಾರೆ.

Kerala CM
ಕೇರಳ ಸಿಎಂ ಪಿಣರಾಯಿ ವಿಜಯನ್​
author img

By

Published : Aug 6, 2020, 10:14 AM IST

ತಿರುವನಂತಪುರಂ (ಕೇರಳ): ಕಾಂಗ್ರೆಸ್ ಮೃದು ಹಿಂದುತ್ವವನ್ನು ಅಳವಡಿಸಿಕೊಳ್ಳಲು ಹೆಸರುವಾಸಿಯಾಗಿದ್ದು, ರಾಮಮಂದಿರ ವಿಚಾರವಾಗಿ ಕಾಂಗ್ರೆಸ್​ ನಾಯಕರಾದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹೊಸದಾಗಿ ಏನನ್ನೂ ಟೀಕಿಸಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ವೇಳೆ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ ಗಾಂಧಿ ಇದು ದೇಶದಲ್ಲಿ ಏಕತೆಯನ್ನು ಹೆಚ್ಚಿಸುತ್ತದೆ ಎಂಬ ಭರವಸೆಯಿದೆ ಎಂದಿದ್ದರು. ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್​ ಅವರು ಪ್ರಿಯಾಂಕಾ ಹೇಳಿಕೆ ಬಗ್ಗೆ ನನಗೆ ಆಶ್ಚರ್ಯವಿಲ್ಲ. ರಾಜೀವ್ ಗಾಂಧಿ, ನರಸಿಂಹ ರಾವ್ ಇದ್ದಾಗಲೂ ಕಾಂಗ್ರೆಸ್ ಇದೇ ಧೋರಣೆಯನ್ನು ಅನುಸರಿಸಿತ್ತು ಎಂದು ವ್ಯಂಗ್ಯವಾಡಿದ್ದಾರೆ.

ಅಯೋಧ್ಯೆ ದೇವಾಲಯ ನಿರ್ಮಾಣದ ಬಗ್ಗೆ ಸಿಪಿಐ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಯೋಧ್ಯೆಯಲ್ಲಿ ಪೂಜೆ ಅನುಮತಿ ನೀಡಿದ್ದು ಕಾಂಗ್ರೆಸ್, ಬಾಬರಿ ಮಸೀದಿ ಉರುಳಿಸುವಾಗಲೂ ಕೂಡಾ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ಜಾಣ ಮೌನ ವಹಿಸಿತ್ತು ಎಂದು ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.

ಅಯೋಧ್ಯೆ ಕುರಿತ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಬದಲಿಗೆ ಕೋವಿಡ್ ದೇಶದಲ್ಲಿ ತೀವ್ರವಾಗಿ ವ್ಯಾಪಿಸುತ್ತಿದ್ದು, ಇದರ ನಿಯಂತ್ರಣಕ್ಕೆ ಹೆಚ್ಚಿನ ಸಮಯ ಮೀಸಲಿಡಬೇಕೆಂದು ಪಿಣರಾಯಿ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.