ETV Bharat / bharat

ಹಥ್ರಾಸ್​ ಪ್ರಕರಣದಲ್ಲಿ ರಾಹುಲ್​,ಪ್ರಿಯಾಂಕಾ ರಾಜಕೀಯ ಮಾಡ್ತಿದ್ದಾರೆ: ಯುಪಿ ಸಚಿವ ಆರೋಪ

author img

By

Published : Oct 1, 2020, 8:38 PM IST

ಹಥ್ರಾಸ್​ ಅತ್ಯಾಚಾರ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಆಡಳಿತ ಪಕ್ಷ ಬಿಜೆಪಿ ಮೇಲೆ ಕಾಂಗ್ರೆಸ್​ ವಾಗ್ದಾಳಿ ನಡೆಸುತ್ತಿದೆ. ಇದೇ ವಿಚಾರವಾಗಿ ಉತ್ತರ ಪ್ರದೇಶ ಸಚಿವ ರಾಹುಲ್​​, ಪ್ರಿಯಾಂಕಾ ವಿರುದ್ಧ ಹರಿಹಾಯ್ದಿದ್ದಾರೆ.

UP Cabinet Minister
UP Cabinet Minister

ಲಕ್ನೋ(ಉತ್ತರ ಪ್ರದೇಶ): ಹಥ್ರಾಸ್​ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ ಮುಖಂಡರಾದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಾಜಕೀಯ ಮಾಡ್ತಿದ್ದಾರೆ ಎಂದು ಯುಪಿ ಸಚಿವ ಸಿದ್ದಾರ್ಥ್​ ನಾಥ್​ ಸಿಂಗ್​ ಆರೋಪಿಸಿದ್ದಾರೆ.

ಈ ಹಿಂದೆ ರಾಜಸ್ಥಾನದಲ್ಲಿ ಇಂತಹ ಘಟನೆ ನಡೆದಾಗ ಕಾಂಗ್ರೆಸ್​ ಮುಖಂಡರು ಅಲ್ಲಿಗೆ ಯಾಕೆ ಭೇಟಿ ನೀಡಲಿಲ್ಲ. ಆ ವೇಳೆ ಸೋನಿಯಾ ಗಾಂಧಿ ಕೂಡ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇದೀಗ ಹಥ್ರಾಸ್​ ಪ್ರಕರಣದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹೇಳಿಕೆ ಬದಲಿಸಲು ಹಥ್ರಾಸ್​ ಸಂತ್ರಸ್ತೆ ಕುಟುಂಬಕ್ಕೆ ಜಿಲ್ಲಾಧಿಕಾರಿ​​ ಬೆದರಿಕೆ?: ವಿಡಿಯೋ

ರಾಜಸ್ಥಾನದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿರುವ ಸುದ್ದಿ ಬಿತ್ತರಗೊಂಡಿವೆ. ಆದರೆ ಅಲ್ಲಿನ ಪೊಲೀಸರು ರೇಪ್​ ನಡೆದಿಲ್ಲ ಎಂದು ಮಾಹಿತಿ ನೀಡಿ, ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂದು ಇದೇ ವೇಳೆ ಆರೋಪಿಸಿದ್ದಾರೆ.

ಹಥ್ರಾಸ್​ನಲ್ಲಿ ನಡೆದಿರುವ ಘಟನೆ ನಿಜಕ್ಕೂ ದುರದೃಷ್ಟಕರ. ಸಂತ್ರಸ್ತೆ ಕುಟುಂಬ ಈಗಾಗಲೇ ಸಿಎಂ ಜತೆ ಮಾತನಾಡಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದೆ. ಸರ್ಕಾರ ಕೂಡ ಇದೇ ಕೆಲಸದಲ್ಲಿದ್ದು, ಈಗಾಗಲೇ ಪ್ರಕರಣವನ್ನ ಎಸ್​ಐಟಿಗೆ ವಹಿಸಲಾಗಿದೆ ಎಂದಿದ್ದಾರೆ.

ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದ್ದು, ಒಂದು ಮನೆ ಹಾಗೂ ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ತಿಳಿಸಿದ್ದಾರೆ. ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಈ ಘಟನೆಯಲ್ಲಿ ರಾಜಕೀಯ ಬಿಟ್ಟು ಬೇರೆ ಏನು ಮಾಡ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.