ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ 22 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ಹಿಂದೆ ಸಾವನ್ನಪ್ಪಿದ್ದಾಳೆ. ಈ ಪ್ರಕರಣ ಇದೀಗ ಹೊತ್ತಿ ಉರಿಯುತ್ತಿದ್ದು, ಯೋಗಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ವಾಕ್ಸಮರ ನಡೆಸುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಉತ್ತರ ಪ್ರದೇಶ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಪ್ರಶಾಂತ್ ಕುಮಾರ್ ಸಂತ್ರಸ್ತೆ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿ ಮಾಹಿತಿ ನೀಡಿರುವ ಎಡಿಜಿ ಪ್ರಶಾಂತ್ ಕುಮಾರ್(ಕಾನೂನು ಮತ್ತು ಸುವ್ಯವಸ್ಥೆ) ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದ್ದು, ಆಕೆಯ ಕುತ್ತಿಗೆಗೆ ಆದ ಗಾಯದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ರಾಹುಲ್, ಪ್ರಿಯಾಂಕಾ ಬಂಧನ, ಬಿಡುಗಡೆ: ದೆಹಲಿಯತ್ತ ಮುಖಮಾಡಿದ ನಾಯಕರು!
ಎಫ್ಎಸ್ಎಲ್ನ ವರದಿಯಲ್ಲಿ ವೀರ್ಯ ಇರಲಿಲ್ಲ ಎಂದು ತಿಳಿದು ಬಂದಿದ್ದು, ಇದು ಅತ್ಯಾಚಾರ ಅಥವಾ ಗ್ಯಾಂಗ್ರೇಪ್ ನಡೆದಿಲ್ಲ ಎಂಬುದನ್ನ ಸ್ಪಷ್ಟಪಡಿಸಿದೆ ಎಂದಿದ್ದಾರೆ. ಮಹಿಳೆ ಪೊಲೀಸರ ಮುಂದೆ ನೀಡಿರುವ ಹೇಳಿಕೆಯಲ್ಲೂ ಅತ್ಯಾಚಾರದ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.