ನವದೆಹಲಿ: ಛತ್ತೀಸ್ಗಢದಲ್ಲಿ ರಾಜೀವ್ ಗಾಂಧಿ ಕಿಸಾನ್ ನ್ಯಾಯ್ ಯೋಜನೆ ಪ್ರಾರಂಭವಾಗಲಿದ್ದು, ಇದು 19 ಲಕ್ಷ ರೈತರಿಗೆ ಅನುಕೂಲವಾಗುವುದರ ಜೊತೆಗೆ ಸಾಗುವಳಿ ಪ್ರದೇಶವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಿಳಿಸಿದ್ದಾರೆ.
ರಾಜ್ಯದ ರೈತರು ಹೆಚ್ಚು ಸಂಪಾದಿಸಲು ಮತ್ತು ಹೆಚ್ಚಿನ ಪ್ರದೇಶವನ್ನು ಸಾಗುವಳಿಗೆ ತರಲು ಸಹಾಯ ಮಾಡುವುದು ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು ಈ ಯೋಜನೆ ಪ್ರಾರಂಭವಾಗಲಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲಿದ್ದಾರೆ ಎಂದು ಭೂಪೇಶ್ ಬಾಗೆಲ್ ತಿಳಿಸಿದ್ದಾರೆ.