ETV Bharat / bharat

ರಾಯಗಢ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ 16ಕ್ಕೆ ಏರಿಕೆ -ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಸೋಮವಾರ ಸಂಜೆ ರಾಯಗಢ ಜಿಲ್ಲೆಯ ಮಹಾದ್ ಪ್ರದೇಶದಲ್ಲಿರುವ ಐದು ಅಂತಸ್ತಿನ ಹಳೆಯ ಕಟ್ಟಡ ಕುಸಿದಿದ್ದು, ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ನಡುವೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Raigad Building Collapse
ರಾಯಗಢ ಕಟ್ಟಡ ಕುಸಿತ ಪ್ರಕರಣ
author img

By

Published : Aug 26, 2020, 10:27 AM IST

Updated : Aug 26, 2020, 10:36 AM IST

ರಾಯಗಢ: ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಇನ್ನೂ ಓರ್ವ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ಹೇಳಲಾಗಿದೆ.

ಕುಸಿದಿರುವ ಐದು ಅಂತಸ್ತಿನ ಕಟ್ಟಡದ ಅವಶೇಷಗಳಿಂದ ನಾಲ್ಕು ವರ್ಷದ ಬಾಲಕ ಮತ್ತು 60 ವರ್ಷದ ಮಹಿಳೆಯನ್ನು ಮಂಗಳವಾರ ರಕ್ಷಿಸಲಾಗಿದೆ. ಮೃತಪಟ್ಟವರಲ್ಲಿ ರಕ್ಷಿಸಿದ ಹುಡುಗನ 30 ವರ್ಷದ ತಾಯಿ ಮತ್ತು ಏಳು ವರ್ಷದ ಇಬ್ಬರು ಸಹೋದರಿಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಕಟ್ಟಡ ಬೀಳುತ್ತಿರುವಾಗ ಅದರ ಕಲ್ಲೊಂದು ತಗುಲಿ ವ್ಯಕ್ತಿಯೊಬ್ಬ ಹೃದಯಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಪೈಕಿ ಐವರು ಪುರುಷರು ಮತ್ತು ಐವರು ಮಹಿಳೆಯರು ಹಾಗೂ ಇಬ್ಬರು ಬಾಲಕಿಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಒಂಬತ್ತು ಜನರನ್ನು ರಕ್ಷಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆ ರಾಯಗಢ ಜಿಲ್ಲೆಯ ಮಹಾದ್ ಪ್ರದೇಶದಲ್ಲಿರುವ ಐದು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿತ್ತು. ಘಟನೆ ಸಂಬಂಧ ಬಿಲ್ಡರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ನಡುವೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

Last Updated : Aug 26, 2020, 10:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.