ರಾಯಗಢ: ಅವಶೇಷಗಳಡಿಯಿಂದ ಮತ್ತೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಸೋಮವಾರ ಸಂಜೆ ರಾಯಗಢ ಜಿಲ್ಲೆಯ ಮಹಾದ್ ಪ್ರದೇಶದಲ್ಲಿರುವ ಐದು ಅಂತಸ್ತಿನ ಅತಿ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿತ್ತು. ಈವರೆಗೆ 60ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಮೂರು ಎನ್‌ಡಿಆರ್‌ಎಫ್ ತಂಡಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.
-
Saddened by the building collapse in Mahad, Raigad in Maharashtra. My thoughts are with the families of those who lost their dear ones. I pray the injured recover soon. Local authorities and NDRF teams are at the site of the tragedy, providing all possible assistance: PM
— PMO India (@PMOIndia) August 25, 2020 " class="align-text-top noRightClick twitterSection" data="
">Saddened by the building collapse in Mahad, Raigad in Maharashtra. My thoughts are with the families of those who lost their dear ones. I pray the injured recover soon. Local authorities and NDRF teams are at the site of the tragedy, providing all possible assistance: PM
— PMO India (@PMOIndia) August 25, 2020Saddened by the building collapse in Mahad, Raigad in Maharashtra. My thoughts are with the families of those who lost their dear ones. I pray the injured recover soon. Local authorities and NDRF teams are at the site of the tragedy, providing all possible assistance: PM
— PMO India (@PMOIndia) August 25, 2020
ತಮ್ಮವರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ಮತ್ತು ಎನ್‌ಡಿಆರ್‌ಎಫ್ ತಂಡಗಳು ಘಟನಾ ಸ್ಥಳದಲ್ಲಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯಗಳನ್ನು ಮಾಡುತ್ತೇವೆ ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.