ಜೋಧಪುರ್(ರಾಜಸ್ಥಾನ): ದೇಶದಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಸ್ಥಾನದಲ್ಲಿ ಕೊರೊನಾ ವೈರಸ್ಗೆ 60 ವರ್ಷದ ಮಹಿಳೆ ಸೇರಿದಂತೆ ಇಂದು ದೇಶದಲ್ಲಿ ಮೂವರು ಬಲಿಯಾಗಿದ್ದಾರೆ. ಜತೆಗೆ 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ರಾಜಸ್ಥಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಾಣಿಸಿಕೊಂಡಿರುವ 22 ಪ್ರಕರಣದಲ್ಲಿ ಅನೇಕರು ದೆಹಲಿಯಲ್ಲಿ ನಡೆದ ತಬ್ಲಿಘಿ ಧಾರ್ಮಿಕ ಸಭೆಯಲ್ಲಿ ಭಾಗಿಯಾದವರು ಎಂದು ತಿಳಿದು ಬಂದಿದೆ.
ಸಾವನ್ನಪ್ಪಿರುವ 60 ವರ್ಷದ ಮಹಿಳೆ ಯಾವುದೇ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ. ಬಿಕಾನೆರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಈ ಮಹಿಳೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ. ಕಳೆದ ಮಾರ್ಚ್ 22ರಿಂದ ರಾಜಸ್ಥಾನ ಸಂಪೂರ್ಣವಾಗಿ ಲಾಕ್ಡೌನ್ ಆಗಿದ್ದು, ಇದರ ಮಧ್ಯೆ ಕೂಡ ಕೆಲವೊಂದು ಕೊರೊನಾ ಪ್ರಕರಣ ಕಂಡು ಬರುತ್ತಿವೆ.
ಮಧ್ಯಪ್ರದೇಶದಲ್ಲಿ 36 ವರ್ಷದ ವ್ಯಕ್ತಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.