ETV Bharat / bharat

ಎಲ್ಲಾ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

ರಾಜಸ್ಥಾನ ಸರ್ಕಾರವು 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಯುಜಿ/ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು, ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಲು ನಿರ್ಧರಿಸಿದೆ.

Rajasthan govt cancels UG/PG exams amid COVID
ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ
author img

By

Published : Jul 5, 2020, 10:49 AM IST

ಜೈಪುರ (ರಾಜಸ್ಥಾನ) : ಕೋವಿಡ್​​ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳ 2019-20 ನೇ ಶೈಕ್ಷಣಿಕ ವರ್ಷದ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ರದ್ದುಗೊಳಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.

ಪರೀಕ್ಷೆಗಳಿಲ್ಲದೆ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಹೆಚ್‌ಆರ್‌ಡಿ) ಹೊರಡಿಸಲಿರುವ ಮಾರ್ಗಸೂಚಿಗಳನ್ನು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಅಂಕಗಳನ್ನು ನಿರ್ಧರಿಸುವ ಪ್ರಕ್ರಿಯೆ ಮತ್ತು ಮುಂದಿನ ತರಗತಿಗೆ ತೇರ್ಗಡೆಗೊಳಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.