ಬಿಕಾನೇರ್ (ರಾಜಸ್ಥಾನ): ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಕಾನೇರ್ ಜಿಲ್ಲೆಯ ಗಜ್ನೇರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ಥಳೀಯರು ಕೊಟ್ಟ ಮಾಹಿತಿ ನಂತರ ಸ್ಥಳಕ್ಕೆ ಗಜ್ನೇರ್ ಪೊಲೀಸ್ ಠಾಣೆಯ ಅಧಿಕಾರಿ ಅಮರ್ ಸಿಂಗ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಮುಖ್ಯ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಅಮರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಮತ್ತೊಂದು ಪ್ರಕರಣ ಶಿವಬಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಾರಾಯಣ ವ್ಯಾಸ್ ಕಾಲೋನಿಯಲ್ಲಿ ನಡೆದಿದೆ. ಮಲಗಿದ್ದ ವೇಳೆ ವ್ಯಕ್ತಿಯೋರ್ವ ತನ್ನ ಪತ್ನಿಗೆ ಬೆಂಕಿ ಹಚ್ಚಿದ್ದು, ತೀವ್ರ ಗಾಯಗಳಿಂದ ಮಹಿಳೆ ಮೃತಪಟ್ಟಿದ್ದಾಳೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿ ಗೋವಿಂದ್ ಚರಣ್ ಪರಿಶೀಲನೆ ನಡೆಸಿದ್ದು, ಪರಾರಿಯಾಗಿರುವ ಮೃತಳ ಪತಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.