ಜೈಪುರ: ರಾಜ್ಯದ ಮೊದಲ ಪ್ಲಾಸ್ಮಾ ಬ್ಯಾಂಕ್ ಜೈಪುರದಲ್ಲಿ ಸ್ಥಾಪಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ರಘು ಶರ್ಮಾ ತಿಳಿಸಿದ್ದಾರೆ.
ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲಾಗುವುದು. ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಲು ಮುಂದೆ ಬರಬೇಕು. ಇತರರ ಜೀವ ಉಳಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಈವರೆಗೆ 33,220 ಕೋವಿಡ್ ಕೇಸ್ಗಳು ಹಾಗೂ 594 ಸಾವು ವರದಿಯಾಗಿದೆ.