ETV Bharat / bharat

ಕೊರೊನಾ ತಡೆಗೆ ತಮಿಳುನಾಡು ಸರ್ಕಾರದ ಕೈಗೊಂಡ ಕ್ರಮಗಳನ್ನು ಸ್ವಾಗತಿಸಿದ ತಲೈವಾ - Rajinikanth latest news

ತಮಿಳುನಾಡಿನಲ್ಲಿ ಮಾರಣಾಂತಿಕ ಕೊರೊನಾ ವೈರಸ್​ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸೂಪರ್​ ಸ್ಟಾರ್​ ರಜನಿಕಾಂತ್​ ಸ್ವಾಗತಿಸಿದ್ದು, ಕೊರೊನಾ ಪೀಡಿತರಿಗೆ ಆರ್ಥಿಕ ನೆರವು ಕೊಡುವಂತೆ ಮನವಿ ಮಾಡಿದ್ದಾರೆ.

Rajinikanth
ರಜನಿಕಾಂತ್
author img

By

Published : Mar 19, 2020, 4:16 PM IST

ಚೆನ್ನೈ: ತಮಿಳುನಾಡಿನಲ್ಲಿ ಕೊರೊನಾ ವೈರಸ್​ ಹರಡುವುದನ್ನು ತಡೆಗಟ್ಟಲು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸೂಪರ್‌ಸ್ಟಾರ್ ರಜನಿಕಾಂತ್ ಸ್ವಾಗತಿಸಿದ್ದಾರೆ.

ಇದರೊಂದಿಗೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ಬಾಧಿತ ವ್ಯಕ್ತಿಗಳಿಗೆ ಆರ್ಥಿಕ ನೆರವು ನೀಡುವಂತೆ ತಲೈವಾ​ ಮನವಿ ಮಾಡಿದ್ದಾರೆ. ಅಲ್ಲದೆ ವೈರಸ್ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಸಹಕಾರ ನೀಡಬೇಕಾಗಿ ಕರೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್​​ ಮಾಡಿದ್ದಾರೆ.

ಈಗಾಗಲೇ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿನ ಶಾಲಾ-ಕಾಲೇಜು, ಮಾಲ್‌, ಸ್ವಿಮ್ಮಿಂಗ್​ ಪೂಲ್​, ಬಾರ್​ ಮತ್ತು ರೆಸ್ಟೋರೆಂಟ್​ಗಳನ್ನು ಮಾರ್ಚ್ 31 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.