ನವದೆಹಲಿ: ಐಎಎಸ್ ಅಧಿಕಾರಿ ರಾಜೀವ್ ಬನ್ಸಾಲ್ ಅವರನ್ನು ಏರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ (ಸಿಎಂಡಿ) ನೇಮಿಸಿ ಕಾರ್ಮಿಕ ಸಚಿವಾಲಯ ಆದೇಶ ಹೊರಡಿಸಿದೆ.
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒಳಗೊಂಡ ಕ್ಯಾಬಿನೆಟ್ ನೇಮಕಾತಿ ಸಮಿತಿ ಅವರ ನೇಮಕಕ್ಕೆ ಅನುಮೋದನೆ ನೀಡಿದೆ ಎಂದು ಸಚಿವಾಲಯ ನೀಡಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಾಗಾಲ್ಯಾಂಡ್ ಕೇಡರ್ನ 1988ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದರು.
ಪ್ರಸ್ತುತ ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.