ನವದೆಹಲಿ : ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಬಡ ಜನರಿಗೆ ಉಚಿತ ಮಾಸ್ಕ್ ವಿತರಿಸುವಂತೆ ಸಿಪಿಐ ರಾಜ್ಯಸಭೆಯಲ್ಲಿ ಒತ್ತಾಯಿಸಿದೆ.
ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಕೇರಳದ ಸಿಪಿಐ ಪಕ್ಷದ ಸಂಸದ ಬಿನೊಯ್ ವಿಶಾಮ್, ಅನೇಕ ಜನರಿಗೆ ಮಾಸ್ಕ್ ಖರೀದಿಸಲು ಸಾಧ್ಯವಾಗ್ತಿಲ್ಲ ಮತ್ತು ಈ ವಿಷಯದ ಬಗ್ಗೆ ಜಾಗೃತಿಯ ಕೊರತೆಯಿದೆ ಇದೆ ಎಂದು ಹೇಳಿದರು.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,960 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. 1,130 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸೋಮವಾರ ಒಟ್ಟು ಕೋವಿಡ್ ಪ್ರಕರಣ ಸಂಖ್ಯೆ 54,87,580 ಕ್ಕೆ ತಲುಪಿದೆ.
ಒಟ್ಟು 10, 32,99 ಸಕ್ರಿಯ ಪ್ರಕರಣಗಳಿವೆ. ಈವರೆಗೆ 43,963,99 ಜನರು ಚೇತರಿಸಿಕೊಂಡಿದ್ದಾರೆ. ಒಟ್ಟು 87,882 ಜನರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.79.68 ರಷ್ಟಿದ್ರೆ, ಸಾವಿನ ಪ್ರಮಾಣ ಶೇಕಡ 1.61ಕ್ಕಿಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.