ನವದೆಹಲಿ: 18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮರಣದಂಡನೆ ವಿಧಿಸುವ ಅವಕಾಶವನ್ನು ಪೋಕ್ಸೊ ಕಾಯ್ದೆಯ ತಿದ್ದುಪಡಿಯಲ್ಲಿ ಒದಗಿಸಿದ್ದು, ಈ ತಿದ್ದುಪಡಿಯನ್ನು ಇಂದು ರಾಜ್ಯಸಭೆ ಅಂಗೀಕರಿಸಿದೆ.
ಇಂದು ರಾಜ್ಯಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸೃತಿ ಇರಾನಿ ಪೋಕ್ಸೋ ತಿದ್ದುಪಡಿ ಕಾಯ್ದೆಯನ್ನು ಪರಿಚಯಿಸಿದ್ದು, ಈ ಕಾಯ್ದೆ ಅಂಗೀಕಾರಗೊಂಡಿದೆ. ಈ ತಿಂಗಳ ಆರಂಭದಲ್ಲಿ ಪೋಕ್ಸೋ ಕಾಯ್ದೆಯನ್ನು ಬಲಪಡಿಸುವ ತಿದ್ದುಪಡಿಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತ್ತು. ಸದ್ಯ ರಾಜ್ಯಸಭೆಯಲ್ಲಿ ಈ ತಿದ್ದುಪಡಿಗೆ ಅಂಗೀಕಾರ ದೊರೆತಿದೆ.