ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭೆಯ 18 ಸ್ಥಾನಗಳಿಗೆ ಇಂದು ಮತದಾನವಾಗಿದ್ದು, ಇದೀಗ ಫಲಿತಾಂಶ ಹೊರ ಬಿದ್ದಿದೆ. ಗುಜರಾತ್, ಆಂಧ್ರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಹಾಗೂ ಈಶಾನ್ಯ ರಾಜ್ಯಗಳಾದ ಮೇಘಾಲಯ, ಮಣಿಪುರ ಮತ್ತು ಮಿಜೋರಾಂಗಳಲ್ಲಿ ಚುನಾವಣೆ ನಡೆದಿದೆ. ಕರ್ನಾಟಕ ಹಾಗೂ ಅರುಣಾಚಲಪ್ರದೇಶದಲ್ಲಿ ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುಜರಾತ್ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ತಲಾ ನಾಲ್ಕು ಸ್ಥಾನಗಳಿಗೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್ ಎರಡು, ಮೇಘಾಲಯ, ಮಣಿಪುರ ಮತ್ತು ಮಿಜೋರಾಂ ಈಶಾನ್ಯ ರಾಜ್ಯಗಳ ತಲಾ ಒಂದೊಂದು ಸ್ಥಾನಗಳಿಗೆ ಇಂದು ಮತದಾನ ನಡೆದಿದೆ. ಕರ್ನಾಟಕದ 4 ಹಾಗೂ ಅರುಣಾಚಲಪ್ರದೇಶದ 2 ಸ್ಥಾನಗಳಿಗೆ ಈಗಾಗಲೇ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಫಲಿತಾಂಶ ಇಂತಿದೆ
ಇಂದಿನ ಫಲಿತಾಂಶದಲ್ಲಿ ಬಿಜೆಪಿ 8 ಸ್ಥಾನ, ಕಾಂಗ್ರೆಸ್ 4 ಹಾಗೂ ಇತರೆ ಪಕ್ಷ 6 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದೆ.
- ಮಧ್ಯಪ್ರದೇಶದಲ್ಲಿ ಬಿಜೆಪಿ ಎರಡು, ಕಾಂಗ್ರೆಸ್ 1 ಸ್ಥಾನ(ಕಾಂಗ್ರೆಸ್ನ ದಿಗ್ವಿಜಯ್ ಸಿಂಗ್, ಬಿಜೆಪಿಯಿಂದ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ಸಮೀರ್ ಸಿಂಗ್ ಸೋಲಂಕಿ)
- ರಾಜಸ್ಥಾನದಲ್ಲಿ ಕಾಂಗ್ರೆಸ್ ಎರಡು, ಬಿಜೆಪಿ 1 ಸ್ಥಾನ(ಕಾಂಗ್ರೆಸ್ನಿಂದ ಕೆ.ಸಿ.ವೇಣುಗೋಪಾಲ್, ರಾಜೇಂದ್ರ ಗೆಹ್ಲೋಟ್ ಗೆಲುವು)
- ಜಾರ್ಖಂಡ್ನಲ್ಲಿ ಬಿಜೆಪಿ ಹಾಗೂ ಮುಕ್ತಿ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಗೆಲುವು
- ಮೇಘಾಲಯದಲ್ಲಿ ಎಂಡಿಎ ಅಭ್ಯರ್ಥಿ ಗೆಲುವು
- ಆಂಧ್ರ ಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಜಯ ಸಾಧಿಸಿದೆ
- ಕರ್ನಾಟಕದಲ್ಲಿ 4 ಸ್ಥಾನಗಳಿಗೆ ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ತಲಾ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
- ಅರುಣಾಚಲಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ತಲಾ ಒಂದು ಸ್ಥಾನದಲ್ಲಿ ಗೆಲುವು
- ಗುಜರಾತ್ನಲ್ಲಿ ಬಿಜೆಪಿ ಮೂರು ಸ್ಥಾನ ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಗೆಲುವು